ಗಿಫ್ಟ್ ಹಿಡಿದು ಮನವೊಲಿಸಲು ಬಂದ ಜನಪ್ರತಿನಿಗಳ ವಿರುದ್ಧ ಆಕ್ರೋಶ

ಬೆಂಗಳೂರು, ಮಾ.16- ಕಳೆದ ಐದು ವರ್ಷಗಳಿಂದ ತಮ್ಮ ಸಮಸ್ಯೆಗಳಿಗೆ ಕಿವಿಕೊಡದೆ ಕಣ್ಣುಮುಚ್ಚಿ ಕುಳಿತು, ಚುನಾವಣೆ ಬಂದ ಕೂಡಲೇ ಉಡುಗೊರೆ ನೀಡಲು ಮುಂದಾದ ಜನಪ್ರತಿನಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿರುವುದು ಈ ಚುನಾವಣೆಯ ವಿಶೇಷವಾಗಿದೆ. ಸೀರೆಗಳಿಗೆ ಬೆಂಕಿ ಹಚ್ಚಿದ ಯುವಕ, ಸ್ಥಳೀಯ ಶಾಸಕರು ತಮ್ಮ ಕ್ಷೇತ್ರದ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ತಲೆಕೆಡಿಸಿಕೊಳ್ಳದೆ ಈಗ ಉಡುಗೊರೆಗಳನ್ನು ನೀಡಿ ಆಮಿಷವೊಡ್ಡುತ್ತಿದ್ದಾರೆ ಎಂದು ಅನೇಕರು ತಿರುಗಿ ಬಿದ್ದಿದ್ದಾರೆ. ಗ್ರಾಮದಲ್ಲಿ ಮೂಲ ಸೌಕರ್ಯಗಳನ್ನು ಒದಗಿಸಿಲ್ಲ. ನಮ್ಮ ಕುಂದುಕೊರತೆಗಳನ್ನು ನಿವಾರಿಸಲು ಯಾವುದೇ ಪ್ರಯತ್ನ ಮಾಡಿಲ್ಲ. […]