ನಾಗಾಲ್ಯಾಂಡ್‍ನಲ್ಲಿ 1 ಕೋಟಿ ಹಣದೊಂದಿಗೆ ಮಹಿಳೆ ಬಂಧನ

ಕೊಹಿಮಾ, ಫೆ.2 – ಚುನಾವಣೆ ಕೆಲವೇ ದಿನಗಳು ಬಾಕಿ ಇರುವಾಗ ನಾಗಾಲ್ಯಾಂಡ್‍ನ ಕೊಹಿಮಾ ಜಿಲ್ಲೆಯ ಮಣಿಪುರ ಗಡಿಯ ಬಳಿ ಒಂದು ಕೋಟಿ ರೂಪಾಯಿ ಹಣವನ್ನು ಸಾಗಿಸುತ್ತಿದ್ದ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ. ಖುಜಾಮಾ ಅಂತರಾಜ್ಯಚೆಕ್‍ಪೊಸ್ಟ್ ಗೇಟ್‍ನಲ್ಲಿ ಮಣಿಪುರ-ನೋಂದಾಯಿತ ವಾಹನವನ್ನು ತಪಾಸಣೆ ಮಾಡುವಾಗ 1 ಕೋಟಿ ನಗದು ಹಣವನ್ನುವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಿಯಮಾನುಸಾರ ಆದಾಯ ತೆರಿಗೆ ಇಲಾಖೆಯು ಹಸ್ತಾಂತರಿಸಲಾಗಿದೆ ಎಂದು ಜಿಲ್ಲಾ ಚುನಾವಣಾಕಾರಿ ಹಾಗೂ ಜಿಲ್ಲಾಧಿಕಾರಿ ಶಾನವಾಸ್ ಸಿ ತಿಳಿಸಿದ್ದಾರೆ. ಕೇಂದ್ರ ಬಜೆಟ್-2023 ಹೈಲೈಟ್ಸ್ ಯಾವುದೇ ರಾಜಕೀಯ ಪಕ್ಷಕ್ಕೆ ನಗದನ್ನು […]

ನಾಳೆ ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಭೇಟಿ

ಬೆಂಗಳೂರು,ಜ.20- ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ನಾಳೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ನಾಳೆ ಬೆಳಿಗ್ಗೆ ವಿಶೇಷ ವಿಮಾನದಲ್ಲಿ ದೆಹಲಿಯಿಂದ ಕಲ್ಬುರ್ಗಿಗೆ ಆಗಮಿಸುವ ಅವರು ವಿಜಯಪುರದಲ್ಲಿ ಜ್ಞಾನಯೋಗಾಶ್ರಮಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಶ್ರೀ ಸಿದ್ಧೇಶ್ವರ ಮಹಾಸ್ವಾಮೀಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವರು. ಜ್ಞಾನಯೋಗಾಶ್ರಮದ ಅಧ್ಯಕ್ಷ ಶ್ರೀ ಬಸವಲಿಂಗ ಮಹಾಸ್ವಾಮೀಜಿ ಈ ಸಂದರ್ಭದಲ್ಲಿ ಹಾಜರಿರುವರು. ದಕ್ಷಿಣ ಸಿಯೋಲ್ ಬೆಂಕಿ ಅವಗಡ, 500ಕ್ಕೂ ಹೆಚ್ಚು ಜನರ ಸ್ಥಳಾಂತರ ಮಧ್ಯಾಹ್ನ ನಾಗಠಾಣ ವಿಧಾನಸಭಾ ಕ್ಷೇತ್ರದಲ್ಲಿ ವಿಜಯ ಸಂಕಲ್ಪ ಅಭಿಯಾನಕೆ ಚಾಲನೆ ನೀಡಲಿದ್ದಾರೆ. […]

ಇಂದು ರಾಜ್ಯಕ್ಕೆ ಅಮಿತ್ ಷಾ ಆಗಮನ

ಬೆಂಗಳೂರು, ಡಿ.29- ದಕ್ಷಿಣ ದಂಡಯಾತ್ರೆಗೆ ಸಜ್ಜಾಗಿ ಕಮಲ ಅರಳಿಸಲು ಪಣ ತೊಟ್ಟಿರುವ ಚುನಾವಣಾ ಚಾಣಕ್ಯ ಅಮಿತ್ ಷಾ ಅವರು ಇಂದು ಸಂಜೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಸಂಘಟನೆಗೆ ಈಗಾಗಲೇ ಟಾಸ್ಕ್ ಕೊಟ್ಟಿದ್ದು, ಕಾರ್ಯಕರ್ತರನ್ನು ಹುರಿದುಂಬಿಸಿ ಮುಂದಿನ ಚುನಾವಣೆಗೆ ಗೆಲುವಿನ ಸಿದ್ಧತೆ ಮಾಡಿಕೊಳ್ಳಲು ರಣತಂತ್ರ ರೂಪಿಸಲಿದ್ದಾರೆ. ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಬೇಕೆಂದು ಖಡಕ್ ಸಂದೇಶ ನೀಡುವ ಮೂಲಕ ಕಾರ್ಯಕರ್ತರನ್ನು ಅಲರ್ಟ್ ಮಾಡಲು ಅಮಿತ್ ಷಾ ಚಾಣಕ್ಯ ತಂತ್ರ ಹೆಣೆದಿದ್ದಾರೆ. ಈ […]

ಕರ್ನಾಟಕದ ಮೇಲೆ ಬಿಜೆಪಿ ಚಾಣಕ್ಯನ ಕಣ್ಣು

ಬೆಳಗಾವಿ,ಡಿ.28- ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಹಳೆ ಮೈಸೂರು ಭಾಗದಲ್ಲಿ ಪಕ್ಷದ ಬಲವರ್ಧನೆಗೆ ಪೂರಕವಾಗಿ ಮಂಡ್ಯದಲ್ಲಿ ನಡೆಯುತ್ತಿರುವ ಸಾರ್ವಜನಿಕ ಸಭೆ ಮತ್ತು ಬೆಂಗಳೂರಿನಲ್ಲಿ ಬೂತ್ ಅಧ್ಯಕ್ಷರ ಸಮಾವೇಶ ನಡೆಯುತ್ತಿದ್ದು, ಪಕ್ಷದ ನಾಯಕರ ಜೊತೆಯೂ ಸಭೆ ನಡೆಸಲು ಅಮಿತ್ ಷಾ ಸಮಯ ನಿಗದಿಪಡಿಸಿದ್ದಾರೆ. ಡಿ.29ರಂದು ರಾತ್ರಿ 10.5ಕ್ಕೆ ಯಲಹಂಕ ವಾಯುನೆಲೆಗೆ ಆಗಮಿಸಲಿರುವ ಅಮಿತ್ ಶಾ ರಾತ್ರಿ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ತಾಜ್ ವೆಸ್ಟ್ ಎಂಡ್ ಹೋಟೆಲ್‍ನಲ್ಲಿ ವಾಸ್ತವ್ಯ […]