ಮುಳ್ಳುಹಂದಿ ಶಿಕಾರಿಗೆ ಹೋದಾಗ ಸುರಂಗದಲ್ಲಿ ಸಿಲುಕು ಇಬ್ಬರ ಸಾವು

ಚಿಕ್ಕಮಗಳೂರು, ಫೆ.28- ಮುಳ್ಳು ಹಂದಿ ಇದ್ದ ಸುರಂಗಕ್ಕೆ ಶಿಕಾರಿ ಮಾಡಲು ನುಗ್ಗಿ ಇಬ್ಬರು ಕೂಲಿಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾಳಿಗನಾಡು ಸಮೀಪದ ಆನೆಗುಂಡಿ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕರಾದ ತಮಿಳುನಾಡು ಮೂಲದ ವಿಜಯ್ (28), ಶರತ್( 26 ) ಸಾವನ್ನಪ್ಪಿದ್ದಾರೆ ದುರ್ದೈವಿಗಳು. ಕಾಳು ಮೆಣಸು ಕುಯ್ಯಲು ಬಂದಿದ್ದ ತಮಿಳುನಾಡಿನ ಕಾರ್ಮಿಕರು ಮುಳ್ಳು ಹಂದಿ ಶಿಕಾರಿ ಮಾಡಲು ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿಯ ಕಾಳಿಕಟ್ಟೆ ಗುಡ್ಡದ ಗವಿಯಲ್ಲಿರುವ ಗುಡ್ಡಕ್ಕೆ […]