ಸಿಲಿಕಾನ್ ಸಿಟಿಯಲ್ಲಿ ಮುಗಿಯದ ಕಾಮಗಾರಿ, ಪಾದಚಾರಿಗಳಿಗೆ ಕಿರಿಕಿರಿ

ಸಿಲಿಕಾನ್ ಸಿಟಿಯಲ್ಲಿ ವರ್ಷ ಪೂರ್ತಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಲೇ ಇರುತ್ತವೆ. ಆದರೆ, ಸಮಸ್ಯೆಗಳು ಮಾತ್ರ ಹಾಗೆಯೇ ಇವೆ. ನಿನ್ನೆ ನೋಡಿದ ರಸ್ತೆಗಳು ಇಂದಿಗೆ ಗುಂಡಿಮಯವಾಗಿರುತ್ತವೆ. ಆ ಕಾಮಗಾರಿ, ಈ ಕಾಮಗಾರಿಗೆಂದು ರಸ್ತೆಗಳನ್ನು ಬಗೆದು ಗುಂಡಿ ಮಾಡಿಬಿಡುತ್ತಾರೆ. ಅದನ್ನು ಮುಚ್ಚಲು ತಿಂಗಳುಗಟ್ಟಲೆ ಬೇಕು. ನಗರದಲ್ಲಿ ಸಂಚರಿಸಬೇಕಾದರೆ ವಾಹನ ಸವಾರರು, ಪಾದಚಾರಿಗಳು ಮೈಯೆಲ್ಲಾ ಕಣ್ಣಾಗಿಟ್ಟುಕೊಂಡಿರಬೇಕು. ಎಲ್ಲಿ ಗುಂಡಿ ಇರುತ್ತವೋ, ಚರಂಡಿಗಳು ಬಾಯಿತೆರೆದಿಟ್ಟು ಕೊಂಡಿರುತ್ತವೋ ತಿಳಿಯದು. ಒಂದು ವೇಳೆ ಎಚ್ಚರ ತಪ್ಪಿದರೆ ಜೀವಕ್ಕೆ ಆಪತ್ತು ಖಚಿತ. ಹೇಳುವುದಕ್ಕೆ ಮಾತ್ರ ಬೆಂಗಳೂರು ಸಿಲಿಕಾನ್ […]

ಕೇಳ್ರಪ್ಪ ಕೇಳಿ, ಹೊಸ ವರ್ಷಕ್ಕೂ ಮುನ್ನ ಬೆಂಗಳೂರು ರಸ್ತೆಗಳು ಗುಂಡಿ ಮುಕ್ತವಾಗಲಿವೆಯಂತೆ..!

ಬೆಂಗಳೂರು,ಡಿ.20-ಹೊಸ ವರ್ಷ ಆರಂಭಕ್ಕೂ ಮುನ್ನ ನಗರದ ರಸ್ತೆಗಳನ್ನು ಗುಂಡಿಮುಕ್ತಗೊಳಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಭರವಸೆ ನೀಡಿದ್ದಾರೆ. ನಗರದಲ್ಲಿ ಈಗಾಗಲೇ ರಸ್ತೆ ಗುಂಡಿಗಳನ್ನು ಮುಚ್ಚಲಾಗಿತ್ತು. ಇತ್ತಿಚೆಗೆ ಬಿದ್ದ ಮಳೆಯಿಂದಾಗಿ ಇನ್ನು ಕೆಲವು ಕಡೆಗಳರಲ್ಲಿ ರಸ್ತೆಗಳಲ್ಲಿ ಗುಂಡಿ ಬಿದ್ದಿರುವುದನ್ನು ಗಂಭೀರವಾಗಿ ಪರಿಗಣಿಸಿ ಡಿ.31ರೊಳಗೆ ಎಲ್ಲ ಗುಂಡಿಗಳನ್ನು ಮುಚ್ಚುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. ನಗರದ ಪ್ರಮುಖ ರಸ್ತೆಗಳನ್ನು ಡಿ.31ರೊಳಗೆ ಮುಚ್ಚಲೆ ಬೇಕು. 31 ರ ನಂತರ ಫೀಕ್ಸ್ ಮೈ ಸ್ಟ್ರೀಟ್ […]

ಮತ್ತೆ ಗುಂಡಿಮಯವಾದ ಸಿಲಿಕಾನ್ ಸಿಟಿ ರಸ್ತೆಗಳು

ಬೆಂಗಳೂರು, ಡಿ.14- ಮಳೆಗೆ ಕಿತ್ತುಬಂದ ರಸ್ತೆ ಡಾಂಬರು.. ಮತ್ತೆ ಸೃಷ್ಟಿಯಾಯ್ತು ಸಿಲಿಕಾನ್ ಸಿಟಿಯಲ್ಲಿ ಗುಂಡಿ ಗಂಡಾಂತರ… ಕಳೆದ ಒಂದು ವಾರದಿಂದ ನಗರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ನಗರದ ರಸ್ತೆಗಳು ಹಾಳಾಗಿ ಗುಂಡಿಮಯವಾಗಿದ್ದು, ನೀರು ತುಂಬಿಕೊಂಡು ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಕಳೆದ ಕೆಲ ದಿನಗಳ ಹಿಂದೆ ನಗರದಲ್ಲಿ ಗುಂಡಿಬಿದ್ದ ರಸ್ತೆಗಳನ್ನು ಮುಚ್ಚಲಾಗಿತ್ತು. ಮತ್ತೆ ಗುಂಡಿಗಳ ಸಂಖ್ಯೆ ದ್ವಿಗುಣವಾಗುತ್ತಿದ್ದು, ವಾಹನ ಸವಾರರಿಗೆ ತೀವ್ರ ತೊಂದರೆಯಾಗುತ್ತಿದ್ದು, ಪಾಲಿಕೆಗೆ ತೀವ್ರ ತಲೆನೋವಾಗಿ ಪರಿಣಮಿಸಿದೆ. ನಾಗರಬಾವಿ ಮುಖ್ಯರಸ್ತೆ, ಆರ್‍ಟಿ ನಗರ, ಶಾಂತಿನಗರ, ವಿಲ್ಸನ್ ಗಾರ್ಡನ್, […]

ನ.15ರೊಳಗೆ ರಸ್ತೆ ಗುಂಡಿ ಮುಚ್ಚಲು ಖಡಕ್ ಆದೇಶ

ಬೆಂಗಳೂರು,ನ.8- ರಸ್ತೆ ಗುಂಡಿಗಳಿಂದ ಹಾಳಾಗಿರುವ ಮಾನವನ್ನು ಮತ್ತೆ ಕಾಪಾಡಿಕೊಳ್ಳಲು ಬಿಬಿಎಂಪಿ ಮುಂದಾಗಿದೆ. ನ.15ರೊಳಗೆ ಗುಂಡಿ ಮುಚ್ಚದಿರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಗುಡುಗಿದ್ದಾರೆ. ಗುಂಡಿ ಮುಚ್ಚದ ಪಾಲಿಕೆ ವಿರುದ್ಧ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು. ಮಾತ್ರವಲ್ಲ ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ಅವರು ಬಿಬಿಎಂಪಿ ಅಡಳಿತಾಧಿಕಾರಿ ರಾಕೇಶ್ ಸಿಂಗ್ ಅವರನ್ನು ತರಾಟೆಗೆ ತೆಗೆದುಕೊಂಡು ರಸ್ತೆ ಗುಂಡಿ ಮುಚ್ಚಲು ಗಡುವು ನೀಡಿದ್ದರು. ಗುಂಡಿಗಳಿಂದ ಹಾಳಾಗಿರುವ ಮಾನವನ್ನು ಮತ್ತೆ ಕಾಪಾಡಿಕೊಳ್ಳಲು ಮನಸ್ಸು ಮಾಡಿರುವ ಆಯುಕ್ತರು ನ.15ರೊಳಗೆ […]

ನಾಳೆಯಿಂದ ರಸ್ತೆಗುಂಡಿ ಮುಚ್ಚುವ ಕಾಮಗಾರಿ ಚುರುಕುಗೊಳಿಸುತ್ತೇವೆ : ತುಷಾರ್ ಗಿರಿನಾಥ್

ಬೆಂಗಳೂರು,ಆ.26- ಹಾಳಾಗಿರುವ ನಗರದ ರಸ್ತೆಗಳನ್ನು ನಾಳೆಯಿಂದ ಸಮರೋಪಾದಿಯಲ್ಲಿ ದುರಸ್ತಿಗೊಳಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಇಂದಿಲ್ಲಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಕಳೆದ ಮೇ ತಿಂಗಳಿನಲ್ಲಿ 20 ಸಾವಿರ ರಸ್ತೆ ಗುಂಡಿಗಳನ್ನು ಮುಚ್ಚಿದ್ದೇವು. ಆದರೆ, ಇತ್ತಿಚೆಗೆ ಭಾರಿ ಮಳೆಯಾಗುತ್ತಿರುವುದರಿಂದ ಮತ್ತೆ ರಸ್ತೆಗಳಲ್ಲಿ ಗುಂಡಿ ಬೀಳುತ್ತಿವೆ ಎಂದು ಮಾಹಿತಿ ನೀಡಿದರು. ಬಿಟ್ಟು ಬಿಟ್ಟು ಮಳೆ ಬರುತ್ತಿರುವುದರಿಂದ ನಮಗೆ ರಸ್ತೆ ಗುಂಡಿಗಳನ್ನು ಮುಚ್ಚಲು ಸಾಧ್ಯವಾಗುತ್ತಿಲ್ಲ. ಮಳೆ ಬಂದಾಗ ಹಾಟ್ ಮೀಕ್ಸ್ ಬಳಸಲು ಸಾಧ್ಯವಾಗುತ್ತಿಲ್ಲ. ಕೋಲ್ಡ್ ಮಿಕ್ಸ್ […]