ಪ್ರಜಾಧ್ವನಿ ಯಾತ್ರೆ ಎದುರಾಳಿಗಳಲ್ಲಿ ಭಯ ಸೃಷ್ಟಿಸಿದೆ : ಡಿಕೆಶಿ

ಬೆಂಗಳೂರು,ಫೆ.6- ಕಾಂಗ್ರೆಸ್ ಆಯೋಜಿಸಿರುವ ಪ್ರಜಾಧ್ವನಿ ಯಾತ್ರೆ ರಾಜಕೀಯ ಎದುರಾಳಿಗಳಿಗೆ ನಡುಕು ಉಂಟು ಮಾಡಿದ್ದು, ಅನಗತ್ಯವಾಗಿ ಟೀಕೆ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ನೇತೃತ್ವದ ತಂಡ ಇಂದು ಚಿತ್ರದುರ್ಗ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಜಾಧ್ವನಿ ಯಾತ್ರೆ ನಡೆಸಲಿದೆ. ಸಲೀಂ ಅಹ್ಮದ್, ಪರಮೇಶ್ವರ್ ಹಾಗೂ ನಾರಾಯಣ ಸ್ವಾಮಿ ಸೇರಿ ಹಲವು ನಾಯಕರು ಇಂದು ಯಾತ್ರೆಗಾಗಿ ಕಾಂಗ್ರೆಸ್ ಕಚೇರಿಯಿಂದ ತೆರಳುತ್ತಿದ್ದೇವೆ. ಉಳಿದ ನಾಯಕರು ನೇರವಾಗಿ ಅಲ್ಲಿಗೆ ಬರಲಿದ್ದಾರೆ ಎಂದರು. ಇದಾದ […]