ಫೆ.3ರಿಂದ ಕಾಂಗ್ರೆಸ್‍ನ 2ನೇ ಹಂತದ ಪ್ರಜಾಧ್ವನಿ ಯಾತ್ರೆ

ಬೆಂಗಳೂರು,ಜ.29- ಮೊದಲ ಹಂತದ ಪ್ರಜಾಧ್ವನಿ ಈ ತಿಂಗಳ ಅಂತ್ಯಕ್ಕೆ ಮುಕ್ತಾಯಗೊಳ್ಳಲಿದ್ದು, ನಂತರ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿ ಇಬ್ಬರು ಪ್ರಮುಖ ನಾಯಕರು ತಂಡದೊಂದಿಗೆ ಫೆಬ್ರವರಿ 3ರಿಂದ ಎರಡನೇ ಹಂತದ ಪ್ರಜಾಧ್ವನಿ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ನಿಗದಿಯಂತೆ ಸಿದ್ದರಾಮಯ್ಯ ಕಲ್ಯಾಣ ಕರ್ನಾಟಕದ ಗಡಿ ಜಿಲ್ಲೆ ಬೀದರ್‍ನ ಜಿಲ್ಲೆಯ ಬಸವಕಲ್ಯಾಣ ಕ್ಷೇತ್ರದಿಂದ, ಡಿ.ಕೆ.ಶಿವಕುಮಾರ್ ಕೋಲಾರದ ಮುಳಬಾಗಿಲು ಕ್ಷೇತ್ರದಿಂದ ಯಾತ್ರೆ ಆರಂಭಿಸಲಿದ್ದಾರೆ. ಈ ಎರಡು ಕ್ಷೇತ್ರಗಳು ಧಾರ್ಮಿಕ ನಂಬಿಕೆಗಳೊಂದಿಗೆ ಬೇರೆತಿದ್ದು, ಅಲ್ಲಿಂದಲೇ ಯಾತ್ರೆ ಆರಂಭಿಸುತ್ತಿರುವುದು ವಿಶೇಷವಾಗಿದೆ. ಮೊದಲ […]