ಮೀಸಲಾತಿ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ, ಪ್ರತಿಭಟನೆ ಕೈಬಿಟ್ಟ ಪ್ರಸನ್ನಾನಂದ ಸ್ವಾಮೀಜಿ

ಬೆಂಗಳೂರು,ಅ.24-ಪರಿಶಿಷ್ಟ ಜಾತಿ , ಪರಿಶಿಷ್ಟ ವರ್ಗಕ್ಕೆ ಮೀಸಲಾತಿ ಹೆಚ್ಚಿಸುವ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕುತ್ತಿದ್ದಂತೆ ವಾಲ್ಮೀಕಿ ಪೀಠದ ಸ್ವಾಮೀಜಿ ತಮ್ಮ ನಿರಶನವನ್ನು ಕೊನೆಗೂ ಹಿಂತೆಗೆದುಕೊಂಡಿದ್ದಾರೆ. ಕಳೆದ 220ಕ್ಕೂ ಹೆಚ್ಚು ದಿನಗಳಿಂದ ಪರಿಶಿಷ್ಟ ವರ್ಗಗಳಿಗೆ ಮೀಸಲಾತಿ ಹೆಚ್ಚಿಸಬೇಕೆಂದು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ವಾಲ್ಮೀಕಿ ಪೀಠದ ಪೀಠಾಧ್ಯಕ್ಷರಾಗಿರುವ ಶ್ರೀ ಪ್ರಸನ್ನಾನಂದ ಸ್ವಾಮೀಜಿಯವರು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದರು. ಕಾರ್ಗಿಲ್‍ನಲ್ಲಿ ಯೋಧರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ ಇದೀಗ ಸರ್ಕಾರ ಎಸ್ಸಿಗೆ ಶೇ.15ರಿಂದ 17 ಹಾಗೂ ಪರಿಶಿಷ್ಟ ವರ್ಗಕ್ಕೆ ಶೇ.3ರಿಂದ 7ರಷ್ಟು ಮೀಸಲಾತಿ […]