ಪ್ರವೀಣ್ ನೆಟ್ಟಾರು ಕುಟುಂಬಕ್ಕೆ 10 ಲಕ್ಷ ರೂ. ವೈಯಕ್ತಿಕ ನೆರವು ಘೋಷಿಸಿದ ಸಚಿವ ಅಶ್ವತ್ಥನಾರಾಯಣ

ಬೆಂಗಳೂರು, ಜು.28- ಸಮಾಜವಿರೋಧಿ ಶಕ್ತಿಗಳ ಅಮಾನುಷ ಕ್ರೌರ್ಯಕ್ಕೆ ಬಲಿಯಾದ ಬಿಜೆಪಿ ಕಾರ್ಯಕರ್ತ ಮತ್ತು ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಕುಟುಂಬಕ್ಕೆ ವೈಯಕ್ತಿಕ ವಾಗಿ 10 ಲಕ್ಷ ರೂ. ನೆರವು ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಇದನ್ನು ನೆರವು ಎಂದು ಹೇಳಲು ಇಷ್ಟ ಪಡುವುದಿಲ್ಲ. ಇದು ನನ್ನ ಕರ್ತವ್ಯ ವಾಗಿದೆ ಎಂದರು. 10 ಲಕ್ಷ ರೂ.ಗಳ ಚೆಕ್ ಅನ್ನು ಪ್ರವೀಣ್ ಅವರ ಕುಟುಂಬಕ್ಕೆ ತಲುಪಿಸಲಾಗುವುದು. […]