ಪ್ರವೀಣ್ ನೆಟ್ಟಾರು ಹಂತಕರ ಸುಳಿವು ನೀಡುವವರಿಗೆ 5 ಲಕ್ಷ ರೂ. ಬಹುಮಾನ ಘೋಷಣೆ

ಬೆಂಗಳೂರು,ಜ.20- ಬಿಜೆಪಿ ಯುವ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳ ಬಗ್ಗೆ ಸುಳಿವು ನೀಡಿದವರಿಗೆ ರಾಷ್ಟ್ರೀಯ ತನಿಖಾ ದಳ(ಎನ್‍ಐಎ) 10 ಲಕ್ಷ ರೂ. ಬಹುಮಾನ ಘೋಷಿಸಿದ್ದಾರೆ. ಈ ಪ್ರಕರಣದ ಪ್ರಮುಖ ಆರೋಪಿಗಳಾಗಿ ತಲೆಮರೆಸಿಕೊಂಡಿರುವ ನಿಷೇಧಿತ ಪಿಎಫ್‍ಐನ ಸದಸ್ಯರಾಗಿರುವ ಕೊಡಾಜಿ ಮೊಹಮ್ಮದ್ ಶರೀಫ್ ಮತ್ತು ಮಸೂದ್.ಕೆ.ಎ ಎಂಬುವರ ಬಗ್ಗೆ ಸುಳಿವು ನೀಡಿದರೆ ತಲಾ 5 ಲಕ್ಷದಂತೆ ಬಹುಮಾನ ನೀಡುವುದಾಗಿ ಪ್ರಕಟಿಸಿದೆ. ಆರೋಪಿಗಳ ಸುಳಿವು ಪತ್ತೆಯಾದರೆ ಬೆಂಗಳೂರಿನ ದೊಮ್ಮಲೂರು ಬಳಿ ಇರುವ ಎನ್‍ಐಎ ಎಸ್‍ಪಿಗೆ ಮಾಹಿತಿ […]

ಪ್ರವೀಣ್ ನೆಟ್ಟಾರು ಹತ್ಯೆ ಹಿಂದೆ ನಿಷೇಧಿತ ಪಿಎಫ್‍ಐ ಸಂಘಟನೆ ಕೈವಾಡ

ಬೆಂಗಳೂರು,ನ.14- ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ನಿಷೇಧಿತ ಪಿಎಫ್‍ಐ ಸಂಘಟನೆಯ ಕೈವಾಡವಿರುವುದು ತನಿಖೆಯಿಂದ ಸಾಬೀತಾಗಿದೆ. ಪ್ರಕರಣವನ್ನು ಕೈಗೆತ್ತಿಕೊಂಡಿದ್ದ ರಾಷ್ಟ್ರೀಯ ತನಿಖಾ ದಳ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿದೆ. ನಿಷೇಧಿತ ಪಿಎಫ್‍ಐನ ಸದಸ್ಯರಾದ ಹಾಗೂ ಪ್ರಸ್ತುತ ಎನ್‍ಐಎ ವಶದಲ್ಲಿರುವ ಶಫೀ ಮತ್ತು ಶಾಹಿದ್ ಅವರೇ ಕೊಲೆಯ ಸೂತ್ರದಾರರಾಗಿದ್ದಾರೆ ಎಂದು ಶಂಕಿಸಿದೆ. ಮಂಗಳೂರು ಜಿಲ್ಲೆಯಾದ್ಯಂತ ಬಿಜೆಪಿಯನ್ನು ಸಂಘಟಿಸುತ್ತಿದ್ದ ಪ್ರವೀಣ್ ನೆಟ್ಟಾರು ಅವರನ್ನು ಹತ್ಯೆ ಮಾಡಿದರೆ ಸಂಘಟನೆಯನ್ನು ಕುಗ್ಗಿಸಬಹುದೆಂಬ ಲೆಕ್ಕಾಚಾರದಿಂದಲೇ ಕಗ್ಗೊಲೆ ಮಾಡಿದ್ದಾರೆ ಎಂಬ […]

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ಮತ್ತೊಬ್ಬ ಆರೋಪಿ ಬಂಧನ

ಮಂಗಳೂರು, ನ.13- ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ರಾಷ್ಟ್ರೀಯ ತನಿಖಾ ದಳ ಬಂಧಿಸಿದೆ. ಸುಳ್ಯಾದ ಶಾಹಿದ್ ಬೆಳ್ಳಾರೆ (40) ಎಂಬವರನ್ನು ನಿನ್ನೆ ಬಂಧಿಸಿರುವುದಾಗಿ ಹೇಳಲಾಗಿದೆ. ಪ್ರವೀಣ್ ನೆಟ್ಟಾರು ಅವರನ್ನು ಜುಲೈ 26ರಂದು ನೆಟ್ಟಾರು ಗ್ರಾಮದಲ್ಲಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಸ್ಥಳೀಯ ಪೊಲೀಸರು ತನಿಖೆ ನಡೆಸುತ್ತಿದ್ದರು. ಘಟನೆಯಲ್ಲಿ ಭಯೋತ್ಪಾದನಾ ಕೃತ್ಯದ ಲಕ್ಷಣಗಳಿವೆ ಎಂಬ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ ತನಿಖೆ ಕೈಗೆತ್ತಿಕೊಂಡಿದೆ. ತೈವಾನ್ ಸಮೀಪ ಹಾರಾಡಿದ 36 ಚೀನೀ ಫೈಟರ್ […]

ಪ್ರವೀಣ್ ನೆಟ್ಟಾರು ಕೊಲೆಯಲ್ಲಿ PFI-ADPI ಕೈವಾಡ ಶಂಕೆ : ಅಲೋಕ್ ಕುಮಾರ್

ಮಂಗಳೂರು,ಆ.11- ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಮೂವರು ಆರೋಪಿಗಳನ್ನು ತಲಪಾಡಿ ಚೆಕ್‍ಪೋಸ್ಟ್ ಬಳಿ ಬಂಧಿಸಲಾಗಿದೆ ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಈ ಮೂವರು ಆರೋಪಿಗಳಿಗೆ ಆಶ್ರಯ ನೀಡಿದ ಮೂವರು ಮಹಿಳೆಯರು ಸೇರಿ 9 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ ಎಂದರು. ಹಂತಕರು ಎಂದು ಗೊತ್ತಿದ್ದರೂ ಅವರಿಗೆ ಆಶ್ರಯ, ಹಣ, ಊಟ ಸಹಾಯ […]

ಪ್ರವೀಣ್ ನೆಟ್ಟಾರು ಹತ್ಯೆ : ಕೇರಳದಲ್ಲಿ ಮೂರು ಹಂತಕರ ಬಂಧನ

ಮಂಗಳೂರು, ಆ.11- ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಮೂವರು ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ವಿಶೇಷ ಪೊಲೀಸ್ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಕೇರಳದಲ್ಲಿ ಈ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ಮಂಗಳೂರಿಗೆ ಕರೆತಂದು ಗೌಪ್ಯ ಸ್ಥಳದಲ್ಲಿರಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವಮುಖಂಡ ಪ್ರವೀಣ್ ನೆಟ್ಟಾರು(32) ಅವರು ಜುಲೈ 26ರಂದು ರಾತ್ರಿ ತಮ್ಮ ಕೋಳಿ ಅಂಗಡಿ ಮುಚ್ಚುತ್ತಿದ್ದಾಗ ವ್ಯವಸ್ಥಿತ ಸಂಚು ರೂಪಿಸಿ ಎರಡು ಬೈಕ್‍ಗಳಲ್ಲಿ […]

ಪ್ರವೀಣ್ ಹತ್ಯೆಗೆ 2 ಬಾರಿ ವಿಫಲ ಯತ್ನ ನಡೆಸಿದ್ದ ಹಂತಕರು

ಬೆಂಗಳೂರು,ಆ.8- ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಹತ್ಯೆಯಾದ ಪ್ರವೀಣ್ ನೆಟ್ಟಾರು ಹತ್ಯೆಗೆ ಈ ಮೊದಲೇ ಎರಡು ಬಾರಿ ವಿಫಲಯತ್ನ ನಡೆಸಿದ್ದ ಹಂತಕರು ಮೂರನೇ ಬಾರಿ ಕೊಲೆ ಮಾಡಿರುವುದು ಪೊಲೀಸರ ತನಿಖೆಯಿಂದ ಬಯಲಾಗಿದೆ. ಮೊದಲ ಬಾರಿ ಹಂತಕರು ಪ್ರವೀಣ್ ಹತ್ಯೆಗೆ ಬಂದಾಗ ಅಂಗಡಿ ಬಳಿ ಜನರು ಇರುವುದನ್ನು ನೋಡಿ ಹಿಂತಿರುಗಿದ್ದರು. ಅದೇ ರೀತಿ ಎರಡನೆ ಬಾರಿ ಹಂತಕರು ಬಂದಾಗ ಅಂಗಡಿಯಲ್ಲಿ ಪ್ರವೀಣ್ ಇರಲಿಲ್ಲ. ಆದರೆ, 3ನೇ ಬಾರಿ ಪ್ರವೀಣ್ ಅಂಗಡಿ ಬಾಗಿಲು ಹಾಕಿ ಮನೆಗೆ ಹೋಗುವಾಗ ಹೊಂಚು ಹಾಕಿ […]

ಪ್ರವೀಣ್ ನೆಟ್ಟಾರು ಹತ್ಯೆ : ಎಫ್‍ಐಆರ್ ದಾಖಲಿಸಿಕೊಂಡ ಎನ್‍ಐಎ

ಮಂಗಳೂರು,ಆ.8- ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣವನ್ನು ಎನ್‍ಐಎ ತಂಡ ದೆಹಲಿ ಕಚೇರಿಯಲ್ಲಿ ಎಫ್‍ಐಆರ್ ದಾಖಲಿಸಿ ಅಧಿಕೃತವಾಗಿ ತನಿಖೆ ಆರಂಭಿಸಿದೆ. ಈಗಾಗಲೇ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಬಂಧಿಸಿದ ಆರೋಪಿಗಳು ಸೇರಿ ನಾಪತ್ತೆಯಾದವರ ಮೇಲೂ ಎನ್‍ಐಎ ತಂಡ ಎಫ್‍ಐಆರ್ ದಾಖಲಿಸಿದೆ. ಜೊತೆಗೆ ಈ ಎಫ್‍ಐಆರ್ ಪ್ರತಿಯನ್ನು ಕೋಟ್ರ್ಗೆ ಸಲ್ಲಿಸಿದ್ದು, ಐಪಿಸಿ 302, 34 ಸೇರಿ ಹಲವು ಕಲಂಗಳಡಿ ಎಫ್‍ಐಆರ್ ದಾಖಲಾಗಿದೆ. ಪ್ರವೀಣ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ […]

ಪ್ರವೀಣ್ ಕುಟುಂಬಕ್ಕೆ ಬಾಲಿವುಡ್ ನಿರ್ಮಾಪಕ ಮುನೀಶ್ ಮುಂದ್ರ 11 ಲಕ್ಷ ಪರಿಹಾರ

ದಕ್ಷಿಣ ಕನ್ನಡ,ಆ.6- ಹತ್ಯೆಯಾದ ಬಿಜೆಪಿ ಯುವ ಮೋರ್ಚಾದ ಮುಖಂಡ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಾಲಿವುಡ್ ಚಿತ್ರ ನಿರ್ಮಾಪಕ ಮುನೀಶ್ ಮುಂದ್ರ 11 ಲಕ್ಷ ಪರಿಹಾರ ನೀಡಿದ್ದಾರೆ. ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯನ್ನು ಖಂಡಿಸಿರುವ ಉದ್ಯಮಿ ಹಾಗು ಬಾಲಿವುಡ್ ಚಿತ್ರ ನಿರ್ಮಾಪಕ ಮುನೀಶ್ ಮುಂದ್ರ ಮೃತರ ಕುಟುಂಬಕ್ಕೆ ಸ್ವಾಂತ್ವಾನ ಹೇಳಿ 11 ಲಕ್ಷ ನೆರವು ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರವೀಣ್ ಕುಟುಂಬದ ಬ್ಯಾಂಕ್ ಖಾತೆಯ […]

ಪ್ರವೀಣ್ ಹತ್ಯೆ ಪ್ರಕರಣ, ಬೆಂಗಳೂರಿನಲ್ಲಿ ಇಬ್ಬರು ವಶಕ್ಕೆ

ಬೆಂಗಳೂರು, ಆ.1- ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆ ಪೊಲೀಸರು ನಗರದಲ್ಲಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ತನಿಖೆ ಸಂಬಂಧ ಕೆಲವು ಮಾಹಿತಿ ಮೇರೆಗೆ ಮಂಗಳೂರಿನಿಂದ ಬೆಂಗಳೂರಿಗೆ ಬಂದಿದ್ದ ವಿಶೇಷ ತಂಡವೊಂದು ನಗರದಲ್ಲಿ ಅಡಗಿ ಕುಳಿತಿದ್ದ ಇಬ್ಬರನ್ನು ವಶಕ್ಕೆ ಪಡೆದು ಮಂಗಳೂರಿಗೆ ಕರೆದೊಯ್ದು ವಿಚಾರಣೆಗೊಳಪಡಿಸಿದ್ದಾರೆ. ಈ ಪ್ರಕರಣದಲ್ಲಿ ಇದುವರೆಗೂ ಒಟ್ಟು 40 ಜನರನ್ನು ವಶಕ್ಕೆ ತೆಗೆದುಕೊಂಡಿರುವ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ವಿಚಾರಣೆಗೊಳಪಡಿಸಿ ಹಲವು ಮಾಹಿತಿಗಳನ್ನು ಕಲೆ ಹಾಕಿದ್ದಾರೆ. ಪ್ರವೀಣ್ […]

ಕೊಲೆಯಾದ ಪ್ರವೀಣ್ , ಮಸೂದ್ ಹಾಗೂ ಫಾಜಿಲ್ ಕುಟುಂಬಸ್ಥರಿಗೆ ಎಚ್‍ಡಿಕೆ ಸಾಂತ್ವನ

ಬೆಂಗಳೂರು,ಜು.31- ಇತ್ತೀಚೆಗೆ ಹತ್ಯೆಗೀಡಾ ಪ್ರವೀಣ್ ನೆಟ್ಟಾರು, ಮಸೂದ್ ಹಾಗೂ ಫಾಜಿಲ್ ಅವರ ಕುಟುಂಬಸ್ಥರನ್ನು ನಾಳೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭೇಟಿ ಮಾಡಿ ಸಾಂತ್ವನ ಹೇಳಲಿದ್ದಾರೆ. ನಾಳೆ ಬೆಳಗ್ಗೆ ಮಂಗಳೂರು ಪ್ರವಾಸ ಕೈಗೊಂಡಿರುವ ಕುಮಾರಸ್ವಾಮಿ, ಪ್ರವೀಣ್ ಅವರ ಮನೆಗೆ ಭೇಟಿ ನೀಡಿ ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ. ಬಳಿಕ ಮಸೂದ್ ಅವರ ಮನೆಗೂ ಭೇಟಿ ನೀಡಿ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿ ಸಾಂತ್ವನ ಹೇಳಲಿದ್ದಾರೆ. ಸುರತ್ಕಲ್‍ಗೆ ಭೇಟಿ ನೀಡಿ ಫಾಜಿಲ್ ಅವರ ಕುಟುಂಬಸ್ಥರನ್ನು ಸಂಪರ್ಕಿಸಿ ಸಾಂತ್ವನ ಹೇಳಲಿದ್ದಾರೆ. ನಂತರ ಸಾಮರಸ್ಯ […]