ಎರಡು ದಿನಗಳಲ್ಲಿ ಪ್ರವೀಣ್ ಹತ್ಯೆ ಸತ್ಯಾಂಶ ಬಹಿರಂಗವಾಗಲಿದೆ : ಕಟೀಲ್

ಬೆಂಗಳೂರು,ಆ.1- ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಸತ್ಯಾಂಶ ಎರಡು ದಿನಗಳಲ್ಲಿ ಹೊರ ಬೀಳುವ ಸಾಧ್ಯತೆ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಕಾರಣಕ್ಕಾಗಿ ಹಂತಕರು ಕೊಲೆ ಮಾಡಿದ್ದಾರೆ ಎಂಬುದು ಒಂದೆರಡು ದಿನಗಳಲ್ಲಿ ಗೊತ್ತಾಗಲಿದೆ. ಈಗಾಗಲೇ ಪೊಲೀಸರು ತನಿಖೆ ನಡೆಸುತ್ತಿರುವುದರಿಂದ ಹೆಚ್ಚಿನ ಮಾಹಿತಿ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಹೇಳಿದರು. ಸಿಎಂ ಬಸವರಾಜ ಬೊಮ್ಮಾಯಿ ಅವರು, ಪ್ರವೀಣ್ ನೆಟ್ಟಾರ್ ಮನೆಗೆ ಹೋಗಿ ಪೋಷಕರಿಗೆ ಸಾಂತ್ವಾನ ಹೇಳಿದ್ದಾರೆ. ಇದನ್ನು […]

ನಾಲಿಗೆ ಹರಿಬಿಟ್ಟು ಕುರ್ಚಿಗೆ ಕುತ್ತು ತಂದುಕೊಂಡ ತೇಜಸ್ವಿ ಸೂರ್ಯ

ಬೆಂಗಳೂರು,ಆ.1- ಸರ್ಕಾರ ಹಾಗೂ ಪಕ್ಷಕ್ಕೆ ಭಾರೀ ಮುಜುಗರ ಸೃಷ್ಟಿಸಿರುವ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾದ ಅಧ್ಯಕ್ಷ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರನ್ನು ಬದಲಾವಣೆ ಮಾಡುವ ಸಂಭವವಿದೆ. ದಕ್ಷಿಣಕನ್ನಡ ಜಿಲ್ಲೆ ಸುಳ್ಯದ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾದ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನಟ್ಟಾರ್ ಕೊಲೆಯಾದ ಸಂದರ್ಭದಲ್ಲಿ ಕಾರ್ಯಕರ್ತರೊಬ್ಬರೊಂದಿಗೆ ತೇಜಸ್ವಿ ಸೂರ್ಯ ದೂರವಾಣಿಯಲ್ಲಿ ಮಾತನಾಡಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಕಾಂಗ್ರೆಸ್ ಸರ್ಕಾರ ಇದ್ದರೆ ನಾವು ಕಲ್ಲುಗಳನ್ನು ಎಸೆಯಬಹುದಿತ್ತು. ಆದರೆ ನಮ್ಮದೇ ಸರ್ಕಾರ. ನಾವು […]

ಪ್ರವೀಣ್ ನೆಟ್ಟಾರು ಹತ್ಯೆ ಹಿಂದೆ ಹಿಜಾಬ್ ನಂಟು..!?

ಬೆಂಗಳೂರು, ಜು.27- ಹಿಜಾಬ್ ಹಿಂದಿರುವ ಶಕ್ತಿಗಳೇ ಸೂಳ್ಯ ತಾಲೂಕಿನಲ್ಲಿ ಬಿಜೆಪಿ ಮುಖಂಡಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಹಿಂದೆ ಇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳ ಮತ್ತು ರಾಜ್ಯದ ಗಡಿ ಭಾಗಗಳಲ್ಲಿ ಇಂತಹ ಘಟನೆಗಳು ಮರುಕಳಿಸುತ್ತಿದ್ದು, ಈ ಬಗ್ಗೆ ಕೇರಳ ಸರ್ಕಾರದ ಜತೆ ಸಿಎಂ ಮಾತಾಡಿದ್ದಾರೆ ಎಂದರು. ಪೊಲೀಸರು, ಕೊಲೆಗಡುಕರ ಬೆನ್ನಟ್ಟಿದ್ದಾರೆ. ಕೇರಳ ಸರ್ಕಾರದ ಜತೆಗೂ ನಮ್ಮ ಪೊಲೀಸರು ಮಾತುಕತೆ ನಡೆಸಿದ್ದಾರೆ. ಅಲ್ಲೂ ಕೂಡ ಕೊಲೆಗಡುಕರ ಬಂಧನಕ್ಕೆ ಕಾರ್ಯಾಚರಣೆ ನಡೆಯುತ್ತಿದೆ […]