ಮುರ್ಮು ಆಯ್ಕೆ ಖಚಿತ, ಬಿಎಸ್‍ವೈ ವಿಶ್ವಾಸ

ಬೆಂಗಳೂರು,ಜು.18- ರಾಷ್ಟ್ರಪತಿ ಚುನಾವಣೆಯಲ್ಲಿ ಕಣಕ್ಕಿಳಿದಿರುವ ಎನ್‍ಡಿಎ ಬೆಂಬಲಿತ ಬಿಜೆಪಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಮೂರನೇ ಎರಡರಷ್ಟು ಬಹುಮತ ಪಡೆದು ಆಯ್ಕೆಯಾಗುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎನ್‍ಡಿಎ ಮೈತ್ರಿಕೂಟದ ಜೊತೆಗೆ ದ್ರೌಪದಿ ಮುರ್ಮು ಅವರಿಗೆ ಅನೇಕ ಪ್ರಾದೇಶಿಕ ಪಕ್ಷಗಳು ಬೆಂಬಲ ಸೂಚಿಸಿವೆ. ಹೀಗಾಗಿ ಅವರ ಗೆಲುವು ನೂರಕ್ಕೆ ನೂರು ಖಚಿತ ಎಂದು ಹೇಳಿದರು. ಅವರೊಬ್ಬ ಸಮರ್ಥ ಮತ್ತು ದಕ್ಷ ಆಡಳಿತಗಾರರು. ಅಲ್ಲದೆ ಆದಿವಾಸಿ ಸಮುದಾಯಕ್ಕೆ ಸೇರಿದ ಮಹಿಳೆ. […]