ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆ : ಮಲ್ಲಿಕಾರ್ಜುನ ಖರ್ಗೆ ಅಖಾಡಕ್ಕೆ
ನವದೆಹಲಿ,ಸೆ.30-ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಖಾಡಕ್ಕೆ ಇಳಿಸುವ ಮೂಲಕ ಪಕ್ಷದಲ್ಲಿ ಬಂಡಾಯಗಾರರಿಗೆ ಸೋನಿಯಾ ಗಾಂಧಿ ಬಿಸಿ ಮುಟ್ಟಿಸಿದ್ದಾರೆ. ಸಂಕಷ್ಟ ಸಮಯದಲ್ಲಿ ಪಕ್ಷದ ಜೊತೆ ನಿಲ್ಲದೆ ಅಧಿಕಾರಕ್ಕಾಗಿ ಒಳಗೊಳಗೆ ಬಂಡಾಯ ಚಟುವಟಿಕೆಗಳಿಗೆ ಕುಮ್ಮಕು ನೀಡುತ್ತಿದ್ದ ಘಟಾನುಘಟಿ ನಾಯಕರನ್ನು ಮೂಲೆಗೆ ಸರಿಸುವ ಮೂಲಕ ಮತ್ತೊಂದು ಸಂಘರ್ಷಕ್ಕೆ ಹೈಕಮಾಂಡ್ ಮುಂದಾಗಿದೆಯೇ ಎಂಬ ಚರ್ಚೆಗಳು ನಡೆಯಲಾರಂಭಿಸಿವೆ. ಸೋನಿಯಾ ಗಾಂಧಿಯವರು ಪಕ್ಷದ ನಾಯಕತ್ವ ವಹಿಸಿಕೊಂಡಾಗಿನಿಂದಲೂ ಅಧ್ಯಕ್ಷರ ಆಯ್ಕೆ ಅವಿರೋಧವಾಗಿಯೇ ನಡೆಯುತ್ತಾ ಬಂದಿದೆ. ನಾಯಕತ್ವ ಮತ್ತು ಹೈಕಮಾಂಡ್ ವಿರುದ್ಧ ಅಪಸ್ವರ ಇಲ್ಲದಂತೆ ಸಂಭಾಳಿಸಿಕೊಂಡು […]