ಶಾಲಾ ಮಕ್ಕಳ ವಯೋಮಿತಿ ಏರಿಕೆ ರದ್ದತಿಗೆ ರುಪ್ಸಾ ಆಗ್ರಹ

ಬೆಂಗಳೂರು,ಜು.27- ಒಂದನೇ ತರಗತಿಗೆ ದಾಖಲಾಗುವ ಮಕ್ಕಳಿಗೆ ಆರು ವರ್ಷ ತುಂಬಿರಬೇಕು ಎಂಬ ಸರ್ಕಾರಿ ಆದೇಶಕ್ಕೆ ಖಾಸಗೀ ಶಾಲೆಗಳ ಒಕ್ಕೂಟ ರುಪ್ಸಾ ವಿರೋಧ ವ್ಯಕ್ತಪಡಿಸಿದೆ. ಏಕಾಏಕಿ ಸರ್ಕಾರ ಇಂತಹ ತೀರ್ಮಾನ ಕೈಗೊಂಡಿರುವುದರಿಂದ ಸಾಕಷ್ಟು ಸಮಸ್ಯೆ ಉದ್ಭವಿಸಲಿದೆ. ಹಾಗಾಗಿ ಈ ಆದೇಶ ರದ್ದುಗೊಳಿಸಬೇಕು ಎಂದು ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಒತ್ತಾಯಿಸಿದ್ದಾರೆ. ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಆರಂಭಗೊಂಡಿರುವ ಇಂತಹ ಸಮಯದಲ್ಲಿ ಏಕಾಏಕಿ ವಯೋಮೀತಿ ಬದಲಾವಣೆ ಮಾಡಿದರೆ ಅದರಿಂದ ಸಾಕಷ್ಟು ಸಮಸ್ಯೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ. ಈ ಹಿಂದೆ ಎಲ್‍ಕೆಜಿಗೆ […]