ಶ್ರೀಲಂಕದಲ್ಲಿ ಬಿರುಸುಗೊಂಡ ರಾಜಕೀಯ: ಪ್ರತಿಭಟನೆ ಹತ್ತಿಕ್ಕಲು ಸೇನೆ ಬಳಕೆ

ಕೊಲಂಬೊ, ಜು.22- ಶ್ರೀಲಂಕಾದ ನೂತನ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರು ಹಿರಿಯ ರಾಜಕಾರಣಿ ಹಾಗೂ ಮಾಜಿ ಗೃಹ ಸಚಿವ ದಿನೇಶ್ ಗುಣವರ್ಧನೆ ಅವರನ್ನು ಪ್ರಧಾನಿಯಾಗಿ ನೇಮಿಸಿದ್ದು, ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ಜೊತೆಯಲ್ಲಿ ಸಚಿವ ಸಂಪುಟದ ಸದಸ್ಯರು ಪ್ರತಿಜ್ಞಾವಿಧಿ ಸ್ವೀಕರಿಸಿ ಕೆಲಸ ಆರಂಭಿಸಿದ್ದಾರೆ. ಭೀಕರ ಆರ್ಥಿಕ ಬಿಕ್ಕಟ್ಟು ಅನುಭವಿಸುತ್ತಿರುವ ಶ್ರೀಲಂಕದಲ್ಲಿ ಏಪ್ರಿಲ್‍ನಿಂದಲೂ ಪ್ರತಿಭಟನೆಗಳು ನಡೆಯುತ್ತಿವೆ. ಕಳೆದ 15 ದಿನಗಳ ಹಿಂದೆ ಪ್ರತಿಭಟನೆಗಳು ಉಗ್ರ ಸ್ವರೂಪಕ್ಕೆ ತಿರುಗಿದಾಗ ಹೆದರಿದ ಅಧ್ಯಕ್ಷ ಗೋಟಬಯ ರಾಜಪಕ್ಷೆ ದೇಶ ಬಿಟ್ಟು ಪರಾರಿಯಾಗಿದ್ದರು, […]