ಕಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ; ತನಿಖೆ ಆರಂಭ

ಬೆಂಗಳೂರು, ಜ.27- ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡುತ್ತಿರುವ ಆರೋಪ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ಕಾರಾಗೃಹ ಉತ್ತರ ವಲಯ ಡಿಐಜಿ ಸೋಮಶೇಖರ್ ಅವರಿಗೆ ಸೂಚಿಸಿದೆ. ಬೆಂಗಳೂರು ಸೆಂಟ್ರಲ್ ಜೈಲ್ ಅೀಧಿಕ್ಷಕರಾಗಿ ಈ ಹಿಂದೆ ಕಾರ್ಯನಿರ್ವಹಿಸಿದ ಅನುಭವವಿರುವ ಆಧಾರದ ಮೇಲೆ ಸೋಮಶೇಖರ್ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಿಸಿದ್ದು, ಅವರು ಖುದ್ದು ಜೈಲಿಗೆ ಭೇಟಿ ಕೊಟ್ಟು ಪ್ರಕರಣದ ತನಿಖೆ ನಡೆಸಲಿದ್ದಾರೆ. ಎರಡು ದಿನಗಳಲ್ಲಿ ಸಂಪೂರ್ಣ ತನಿಖೆ ನಡೆಸಿ ಮುಖ್ಯಮಂತ್ರಿ, […]