ಮ್ಯಾಕ್ಸ್ ಆಸ್ಪತ್ರೆಯ ಖಾಸಗಿ ವಾರ್ಡ್‍ಗೆ ಕ್ರಿಕೆಟಿಗ ರಿಷಭ್ ಪಂತ್ ಶಿಫ್ಟ್

ನವದೆಹಲಿ, ಜ. 2- ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಭಾರತದ ವಿಕೆಟ್ ಕೀಪರ್ ಆರೋಗ್ಯದಲ್ಲಿ ತುಸು ಚೇತರಿಕೆ ಕಂಡಿದ್ದು, ಅವರನ್ನು ಮ್ಯಾಕ್ಸ್ ಆಸ್ಪತ್ರೆಯ ಸುಸಜ್ಜಿತ ಖಾಸಗಿ ವಾರ್ಡ್‍ಗೆ ಶಿಫ್ಟ್ ಮಾಡಲಾಗಿದೆ. ಡಿಡಿಸಿಎ ನಿರ್ದೇಶಕ ಶ್ಯಾಮ್ ಶರ್ಮಾ ಅವರು ರಿಷಭ್ ಪಂತ್‍ರ ಆರೋಗ್ಯದ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, `ಡಿಸೆಂಬರ್ 30ರಂದು ಕಾರಿನ ಅಪಘಾತದಲ್ಲಿ ತೀವ್ರ ತರವಾದ ಗಾಯಕ್ಕೆ ಒಳಗಾಗಿದ್ದ ಖ್ಯಾತ ಕ್ರಿಕೆಟಿಗ ರಿಷಭ್ ಪಂತ್ ಅವರು ಈಗ ಚೇತರಿಕೆಯ ಹಾದಿಯಲ್ಲಿದ್ದು ಅವರನ್ನು ನಿನ್ನೆ ಸಂಜೆ ಮ್ಯಾಕ್ಸ್ […]