ಜಾಲಿಮೂಡ್‍ನಲ್ಲಿ ರಾಹುಲ್, ಪ್ರಿಯಾಂಕಾ

ನವದೆಹಲಿ,ಫೆ.20- ಭಾರತ್ ಜೋಡೋ ಯಾತ್ರೆ ಯಶಸ್ವಿ ಗುಂಗಿನಲ್ಲಿರುವ ಕಾಂಗ್ರೆಸ್ ಸಂಸದ ರಾಹುಲ್‍ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ಜಾಲಿ ಮೂಡ್‍ನಲ್ಲಿದ್ದಾರೆ. ಸಹೋದರಿ ಪ್ರಿಯಾಂಕಾ ಅವರೊಂದಿಗೆ ಜಮ್ಮು-ಕಾಶ್ಮೀರದ ಗುಲ್ಮಾರ್ಗ್‍ನಲ್ಲಿರುವ ರಾಹುಲ್‍ಗಾಂಧಿ ಅವರು ಹಿಮ ವಾಹನದಲ್ಲಿ ಸವಾರಿ ಮಾಡುತ್ತಿರುವ ವಿಡಿಯೋ ತುಣುಕಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರಾಹುಲ್‍ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ಗುಲ್ಮಾರ್ಗ್ ಪ್ರವಾಸಿ ತಾಣಗಳಲ್ಲಿ ಸವಾರಿ ಮಾಡುತ್ತಿರುವ ವಿಡಿಯೋ ತುಣುಕುಗಳನ್ನು ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಅವರು ಟ್ವಿಟರ್‍ನಲ್ಲಿ ಹಂಚಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ದೊಡ್ಡ […]

ದೆಹಲಿ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆ, ರಾಹುಲ್ ಜೊತೆ ಹೆಜ್ಜೆ ಹಾಕಿದ ಸೋನಿಯಾ, ಪ್ರಿಯಾಂಕಾ

ನವದೆಹಲಿ,ಡಿ.25- ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆ 108ನೇ ದಿನವಾದ ಇಂದು ಮುಂಜಾನೆ ರಾಜಧಾನಿ ದೆಹಲಿ ಪ್ರವೇಶಿಸಿದ್ದು, ಸೋನಿಯಾ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಒಟ್ಟಿಗೆ ಸಾಥ್ ನೀಡಿದರು. ಯಾತ್ರೆಯಲ್ಲಿ ಕೋವಿಡ್ ನಿಯಮಾವಳಿಗಳನ್ನು ಅನುಸರಿಸುವಂತೆ ಕೇಂದ್ರ ಆರೋಗ್ಯ ಸಚಿವರು ಸೂಚನೆ ನಡುವೆಯೂ ಯಾತ್ರೆ ಇಂದು ದೆಹಲಿ ಪ್ರವೇಶಿಸಿದ್ದು, ರಾಹುಲ್ ಗಾಂಧಿ ಮತ್ತಿತರರನ್ನು ಪಕ್ಷದ ದೆಹಲಿ ನಾಯಕರು ಭಾದರ್‍ಪುರ್ ಗಡಿಯಲ್ಲಿ ಸ್ವಾಗತಿಸಿದರು. ನಂತರ ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಅನಿಲ್ ಚೌಧರಿ, ಜೈರಾಮ್ ರಮೇಶ, […]

ಸುಳ್ಳು ಜಾಹಿರಾತುಗಳಿಂದ ಕಾನೂನು ಸುವ್ಯವಸ್ಥೆ ಸುಧಾರಿಸಲ್ಲ : ಪ್ರಿಯಾಂಕ ವಾದ್ರಾ

ಲಖ್ನೋ,ಸೆ.15- ಪ್ರತಿದಿನ ಪತ್ರಿಕೆಗಳು ಮತ್ತು ದೂರದರ್ಶನಗಳಲ್ಲಿ ಸುಳ್ಳು ಜಾಹೀರಾತುಗಳನ್ನು ನೀಡುವುದರಿಂದ ಕಾನೂನು ಮತ್ತು ಸುವ್ಯವಸ್ಥೆ ಸುಧಾರಿಸುವುದಿಲ್ಲ. ಅಷ್ಟಕ್ಕೂ ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲಿನ ಘೋರ ಅಪರಾಧಗಳು ಏಕೆ ಹೆಚ್ಚುತ್ತಿವೆ? ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಯೋಗಿ ಆದಿತ್ಯನಾಥ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಲಖಿಂಪುರ ಖೇರಿಯಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಅಪ್ರಾಪ್ತೆ ಸಹೋದರಿಯ ಮೃತ ದೇಹ ಪತ್ತೆಯಾದ ವರದಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಅವರು, ಹೆಣ್ಣುಮಕ್ಕಳ ಮೇಲೆಯೇ ಘೋರ ಅಪರಾಧಗಳು […]

ರಾಜೀವ್ ಗಾಂಧಿ ಜನ್ಮದಿನ : ತಂದೆಗೆ ಶ್ರದ್ಧಾಂಜಲಿ ಸಲ್ಲಿಸಿದ ರಾಹುಲ್, ಪ್ರಿಯಾಂಕಾ

ನವದೆಹಲಿ,ಆ.20- ಭಾರತದ ಮಾಜಿ ಪ್ರಧಾನಿ, ರಾಜೀವ್ ಗಾಂಧಿ ಅವರ 78ನೇ ಜಯಂತಿ ಅಂಗವಾಗಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ವೀರ ಭೂಮಿಗೆ ತೆರಳಿ ತಮ್ಮ ತಂದೆಯವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಜೀವ್ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ, ಸಂಸದ ಕೆ.ಸಿ.ವೇಣುಗೋಪಾಲ್, ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೂಡ ನಮನ ಸಲ್ಲಿಸಿದ್ದಾರೆ. ಹಾಗಯೇ ಹಲವಾರು ಸಚಿವರು ಮತ್ತು ನಾಯಕರು ಟ್ವೀಟ್ ಮಾಡಿ, ರಾಷ್ಟ್ರದ ಅಭಿವೃದ್ಧಿಗೆ ಮಾಜಿ ಪ್ರಧಾನಿಯವರ […]