ಪೊಲೀಸ್ ಅಧಿಕಾರಿ ನಂದೀಶ್ ಸಾವಿನ ಕುರಿತು ಉನ್ನತ ಮಟ್ಟದ ತನಿಖೆಗೆ ಕಾಂಗ್ರೆಸ್ ಆಗ್ರಹ

ಬೆಂಗಳೂರು,ಅ.30- ಕೆ.ಆರ್.ಪುರಂನ ಪೊಲೀಸ್ ಅಧಿಕಾರಿ ನಂದೀಶ್ ಸಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಪಕ್ಷ, ಸಚಿವ ಎಂ.ಟಿ.ಬಿ.ನಾಗರಾಜ್ ಅವರ ಹೇಳಿಕೆಯನ್ನು ತನಿಖೆಗೊಳಪಡಿಸುವಂತೆ ಒತ್ತಾಯಿಸಿದೆ. ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಜಂಟಿ ಪತ್ರಿಕಾಗೋಷ್ಠಿ ನಡೆಸಿ, ನಂದೀಶ್ ಸಾವು ಪ್ರಕರಣದ ಘಟನಾವಳಿಗಳನ್ನು ವಿವರಿಸಿದ್ದಾರೆ. ಖುದ್ದು ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಅವರೇ ಸರ್ಕಾರದ ಭ್ರಷ್ಟಾಚಾರವನ್ನು ಬಯಲಿಗೆ ತಂದಿದ್ದಾರೆ. ವರ್ಗಾವಣೆಗಾಗಿ 70ರಿಂದ 80 ಲಕ್ಷ ಹಣ ನೀಡಿ ಬಂದವನಿಗೆ ಹೃದಯಾಘಾತವಾಗದೆ ಇನ್ನೇನು ಆಗಲು ಸಾಧ್ಯ ಎಂದು […]

ಬಿಎಂಎಸ್ ಟ್ರಸ್ಟ್ ಅಕ್ರಮ ತನಿಖೆಗೆ ಬಿಗಿಪಟ್ಟು: ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಬೆಂಗಳೂರು, ಸೆ.23- ಬಿಎಂಎಸ್ ಟ್ರಸ್ಟ್‍ನಲ್ಲಿ ನಡೆದಿರುವ ಅವ್ಯವಹಾರ ಪ್ರಕರಣವನ್ನು ತನಿಖೆಗೆ ವಹಿಸಬೇಕೆಂದು ಜೆಡಿಎಸ್ ಪಟ್ಟು ಹಿಡಿದು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ ಪರಿಣಾಮ ಇಂದು ಯಾವುದೇ ಕಾರ್ಯ-ಕಲಾಪ ನಡೆಯದೆ ಮಳೆಗಾಲದ ಅಧಿವೇಶನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು. ಒಂದು ಕಡೆ ಜೆಡಿಎಸ್ ವಿಧಾನಸಭೆಯ ಕಲಾಪಕ್ಕೆ ಅಡ್ಡಿಪಡಿಸಿ ಸದನದ ಬಾವಿಗಿಳಿದರೆ ಮತ್ತೊಂದು ಕಡೆ ಪ್ರತಿಪಕ್ಷ ಕಾಂಗ್ರೆಸ್ 40% ಕಮಿಷನ್ ಭ್ರಷ್ಟಾಚಾರವನ್ನು ತನಿಖೆಗೆ ವಹಿಸಬೇಕೆಂದು ಆಗ್ರಹಿಸಿತು. ಈ ನಡುವೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಗದ್ದಲ, ಆರೋಪ, ಪ್ರತ್ಯಾರೋಪ ನಡೆಯಿತು. ಆ ಸಂದರ್ಭದಲ್ಲಿ […]

ಮತ್ತೆ ಮುನ್ನೆಲೆಗೆ ಬಂದ ಸಿದ್ದು ದುಬಾರಿ ವಾಚ್ ವಿವಾದ

ಬೆಂಗಳೂರು,ಸೆ.13- ಪಿಎಸ್‍ಐ ನೇಮಕಾತಿ ಅಕ್ರಮ ಹಾಗೂ 40% ಕಮೀಷನ್ ಆರೋಪ ಮಾಡುತ್ತಿರುವ ಪ್ರತಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಲು ಮುಂದಾಗಿರುವ ಬಿಜೆಪಿ ಮತ್ತೆ ಹೊಬ್ಲೆಟ್ ವಾಚ್ ವಿವಾದವನ್ನು ಮುಂದಿಡಲು ತೀರ್ಮಾನಿಸಿದೆ. ಪ್ರವಾಹ ಭ್ರಷ್ಟಾಚಾರ ಇನ್ನಿತರೆ ವಿಷಗಳನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ಹಣಿಯಲು ಯತ್ನಿಸುತ್ತಿರುವ ವಿಪಕ್ಷ ಕಾಂಗ್ರೆಸ್‍ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ದುಬಾರಿ ಹೊಬ್ಲೊಟ್ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸುವಂತೆ ಪಟ್ಟುಹಿಡಿದು ಒತ್ತಾಯಿಸಲಿದೆ. 2016ರಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದ ಸಂದರ್ಭದಲ್ಲಿ ರಾಜಕೀಯ ಸಂಚಲನ ಮೂಡಿಸಿದ್ದ ಹೊಬ್ಲೋಟ್ ವಾಚ್ ಉಡುಗೊರೆ ಪ್ರಕರಣವನ್ನು […]

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ವಿದ್ಯುತ್ ಖರೀದಿ ಅಕ್ರಮ : ಸಮಗ್ರ ತನಿಖೆಗೆ ಸಿದ್ಧತೆ

ಬೆಂಗಳೂರು,ಆ.20-ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯ ವೇಳೆ ವಿದ್ಯುತ್ ಖರೀದಿಯಲ್ಲಿ ವ್ಯಾಪಕ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದ್ದು, ಇದನ್ನು ಸಮಗ್ರವಾಗಿ ತನಿಖೆ ನಡೆಸಲು ಇಂಧನ ಇಲಾಖೆ ಮುಂದಾಗಿದೆ. ಮುಂದಿನ ವಾರ ಇಂಧನ ಇಲಾಖೆಯಿಂದ ತನಿಖೆಗೆ ಅಧಿಕೃತ ಆದೇಶ ಹೊರಬೀಳಲಿದ್ದು, ಪ್ರಮುಖ ನಾಯಕರಿಗೆ ತನಿಖೆಯ ಬಿಸಿ ಎದುರಾಗುವ ಸಾಧ್ಯತೆ ಇದೆ. ಈ ಮೂಲಕ 2023ರ ವಿಧಾನಸಭೆ ಚುನಾವಣೆಗೂ ಮುನ್ನವೇ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಮತ್ತೊಂದು ಸುತ್ತಿನ ರಾಜಕೀಯ ಸಂಘರ್ಷ ಏರ್ಪಡುವುದು ಬಹುತೇಕ ಖಚಿತವಾಗಿದೆ. ಕೇಂದ್ರ ಸರ್ಕಾರ ನಿಗದಿಪಡಿಸಿದ್ದ ದರವನ್ನು […]

ಅಮಿತ್ ಶಾ ಪುತ್ರನ ಆದಾಯ ತನಿಖೆ ಏಕಿಲ್ಲ..? ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು, ಜು.26- ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜೈ ಶಾ ಆದಾಯ ಮೂಲವನ್ನು ಕೇಂದ್ರ ತನಿಖಾ ಸಂಸ್ಥೆಗಳು ಏಕೆ ಹುಡುಕುತ್ತಿಲ್ಲಾ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಕೆಪಿಸಿಸಿ ಎಂದು ಸರಣಿ ಟ್ವಿಟ್‍ಗಳ ಮೂಲಕ ಸೋನಿಯಾಗಾಂಧಿ ಅವರ ಜಾರಿ ನಿರ್ದೇಶನಾಲಯದ ವಿಚಾರಣೆಯನ್ನು ಪ್ರಶ್ನಿಸಿದೆ. ಅದಾನಿ ಪೋರ್ಟ್‍ನಲ್ಲಿ ಹಲವು ಬಾರಿ ಸಾವಿರಾರು ಕೋಟಿ ರೂ. ಮೊತ್ತದ ಡ್ರಗ್ಸ್ ಪತ್ತೆಯಾಯಿತು. ಸಿಬಿಐ, ಇಡಿ ಇದರ ಕುರಿತು ಏಕೆ ತನಿಖೆ ಮಾಡುತ್ತಿಲ್ಲ ಎಂದು ಪ್ರಶ್ನಿಸಲಾಗಿದೆ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ತರಲು […]