ಸಿಬಿಐ, ಇಡಿ ನಿಷ್ಪಕ್ಷಪಾತವಾಗಿ ಕಾರ್ಯ ನಿರ್ವಹಿಸುತ್ತಿವೆ : ಶಾ

ನವದೆಹಲಿ,ಮಾ.18- ಸಿಬಿಐ ಮತ್ತು ಜಾರಿ ನಿರ್ದೇಶನಾಲಯದಂತಹ ತನಿಖಾ ಸಂಸ್ಥೆಗಳು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಿವೆ. ಎರಡು ಪ್ರಕರಣಗಳನ್ನು ಹೊರತುಪಡಿಸಿದರೆ ಉಳಿದ ಎಲ್ಲಾ ಪ್ರಕರಣಗಳು ಯುಪಿಎ ಸರ್ಕಾರದ ಅವಧಿಯಲ್ಲಿ ದಾಖಲಾಗಿರುವ ಪ್ರಕರಣಗಳಾಗಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಪಾದಿಸಿದ್ದಾರೆ. ದೆಹಲಿಯಲ್ಲಿ ನಡೆದ ಕಾನ್‍ಕ್ಲೇವ್‍ನಲ್ಲಿ ಭಾಗವಹಿಸಿ ಮಾತನಾಡಿದ ಅಮಿತ್ ಶಾ, ತನಿಖಾ ಸಂಸ್ಥೆಗಳು ಏನೇ ಮಾಡಿದರೂ ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಬಹುದು ಅದನ್ನು ಬಿಟ್ಟು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಲು ಮುಂದಾಗಬಾರದು ಎಂದು ಕಿವಿಮಾತು ಹೇಳಿದ್ದಾರೆ. ಸಿಬಿಐ ಮತ್ತು ಇಡಿ […]