ಲವ್ ಜಿಹಾದ್ ನಿಷೇಧ ಕಾಯ್ದೆ ಜಾರಿಗೆ ಸರ್ಕಾರ ಚಿಂತನೆ

ಬೆಂಗಳೂರು,ನ.21- ಈಗಾಗಲೇ ಮತಾಂತರ ಮತ್ತು ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದಿರುವ ರಾಜ್ಯ ಸರ್ಕಾರ ಇದೀಗ ಲವ್ ಜಿಹಾದ್ ನಿಷೇಧಿಸುವ ಕಾಯ್ದೆಯನ್ನು ಜಾರಿ ಮಾಡಲು ಚಿಂತನೆ ನಡೆಸಿದೆ. ಡಿಸೆಂಬರ್ 19ರಿಂದ ಬೆಳಗಾವಿಯ ಸುವರ್ಣ ವಿಕಾಸಸೌಧದಲ್ಲಿ ಆರಂಭವಾಗಲಿರುವ ಚಳಿಗಾಲದ ಅಧಿವೇಶನದಲ್ಲಿ ಲವ್ ಜಿಹಾದ್ ನಿಷೇಧಿಸುವ ಕಾಯ್ದೆಯನ್ನು ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಂಡಿಸಲು ಸರ್ಕಾರ ತೀರ್ಮಾನಿಸಿದೆ. ಈಗಾಗಲೇ ಗೃಹ ಇಲಾಖೆ ಮತ್ತು ಕಾನೂನು ಇಲಾಖೆ ಜಂಟಿ ಸಹಭಾಗಿತ್ವದಲ್ಲಿ ಈ ಕಾಯ್ದೆಗೆ ಅಂತಿಮ ರೂಪುರೇಷೆಗಳು ಸಿದ್ದವಾಗಿದ್ದು, ಅಧಿವೇಶನದಲ್ಲಿ ಮಂಡನೆಯಾಗುವುದು […]