ಬಿಎಸ್‍ವೈ-ಮೋದಿ ಗೌಪ್ಯ ಮಾತುಕತೆ, ರಾಜ್ಯ ಬಿಜೆಪಿಯಲ್ಲಿ ಸಂಚಲನ

ನವದೆಹಲಿ,ಜ.17- ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪ್ರಧಾನಿ ನರೇಂದ್ರಮೋದಿ ಅವರು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜೊತೆ ನಡೆಸಿರುವ ಗೌಪ್ಯ ಮಾತುಕತೆ ಸಂಚಲನ ಸೃಷ್ಟಿಸಿದೆ. ರಾಜ್ಯ ಬಿಜೆಪಿಯೊಳಗೆ ಯಡಿಯೂರಪ್ಪ ನವರ ಯುಗ ಮುಗಿಯಿತು ಎಂದು ಅವರ ವಿರೋಧಿಗಳು ಮಾತನಾಡಿಕೊಳ್ಳುತ್ತಿರುವ ಸಂದರ್ಭದಲ್ಲೇಮೋದಿ ಮತ್ತು ಬಿಎಸ್‍ವೈ ಅವರ ಭೇಟಿ ಅನೇಕ ಸಂಶಯಗಳನ್ನು ಹುಟ್ಟು ಹಾಕಿದೆ. ಮೇಲ್ನೋಟಕ್ಕೆ ಇದೊಂದು ಸೌಹಾರ್ದಯುತ ಭೇಟಿ ಎಂದು ಹೇಳಲಾಗಿದೆ. ಶಿವಮೊಗ್ಗದಲ್ಲಿ ಉದ್ಘಾಟನೆಗೆ ಸಿದ್ದಗೊಂಡಿರುವ ವಿಮಾನ ನಿಲ್ದಾಣ, ಇತರೆ ಯೋಜನೆಗಳ […]