ಧರ್ಮನಿಂದನೆ ಮಾಡಿದ ಬಿಜೆಪಿ ಶಾಸಕ ಅರೆಸ್ಟ್
ಹೈದರಾಬಾದ್, ಆ.23- ಪ್ರವಾದಿ ಅವರ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ಆರೋಪಕ್ಕಾಗಿ ಹೈದರಾಬಾದ್ ಪೊಲೀಸರು ಬಿಜೆಪಿ ಶಾಸಕ ಟಿ.ರಾಜಾಸಿಂಗ್‍ರನ್ನು ಬಂಧಿಸಿದ್ದಾರೆ. ತೆಲಂಗಾಣದ ಹೈದರಾಬಾದ್‍ನಲ್ಲಿ ಕಳೆದ ವಾರ ಹಾಸ್ಯ ಕಲಾವಿದ ಮುನಾವರ್ ಫಾರುಕಿ ಅವರ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗಿತ್ತು. ಫಾರುಕಿ ಅವರ ಕಾರ್ಯಕ್ರಮವನ್ನು ನಿಲ್ಲಿಸುವಂತೆ ಶಾಸಕ ರಾಜಾಸಿಂಗ್ ಬೆದರಿಕೆ ಹಾಕಿದ್ದರು, ಇಲ್ಲವಾದರೆ ಸ್ಥಳಕ್ಕೆ ತೆರಳಿ ಅಡ್ಡಿ ಪಡಿಸುವ ಬೆದರಿಕೆ ಒಡ್ಡಿದ್ದರು. ಇದರಿಂದ ಅವರನ್ನು ಗೃಹ ಬಂಧನದಲ್ಲಿ ಇಡಲಾಗಿತ್ತು. ಅಷ್ಟಕ್ಕೆ ಸುಮ್ಮನಾಗದ ರಾಜಾಸಿಂಗ್ ವಿಡಿಯೋ ಮಾಡಿ ಫಾರುಕಿಯನ್ನು ಟೀಕಿಸುವ ಭರದಲ್ಲಿ […]