ವರ್ಷಕ್ಕೊಮ್ಮೆ ನೀರಿನ ದರ ಏರಿಸಲು ಜಲಮಂಡಳಿ ಪ್ರಸ್ತಾಪ

ಬೆಂಗಳೂರು, ನ.17- ವಿದ್ಯುತ್ ದರ ಪರಿಷ್ಕರಣೆ ಮಾದರಿಯಲ್ಲಿ ಬೆಂಗಳೂರಿನ ನೀರಿನ ದರ ಪರಿಷ್ಕರಣೆ ಮಾಡಲು ಅವಕಾಶ ನೀಡಬೇಕೆಂದು ಜಲಮಂಡಳಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಜನರಿಗೆ ಮತ್ತೊಂದು ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ವರ್ಷಕ್ಕೊಮ್ಮೆ ನೀರಿನ ದರ ಪರಿಷ್ಕರಿ ಸಲು ಅವಕಾಶ ನೀಡಬೇಕೆಂದು ಬೆಂಗಳೂರು ಜಲಮಂಡಳಿಯು ಸರ್ಕಾರಕ್ಕೆ ಪ್ರಸ್ತಾವನೆ ನೀಡಿದೆ ಎಂದು ತಿಳಿದು ಬಂದಿದೆ. ಮಂಡಳಿಯ ಆಡಳಿತ ನಿರ್ವಹಣಾ ವೆಚ್ಚ ಸರಿದೂಗಿಸುವುದು ಕಷ್ಟಸಾಧ್ಯವಾಗಿದೆ. ಹೀಗಾಗಿ ವರ್ಷಕ್ಕೊಮ್ಮೆಯಾದರೂ ನೀರಿನ ದರ ಪರಿಷ್ಕರಣೆಗೆ ಅವಕಾಶ ನೀಡಬೇಕೆಂದು […]