ಕೋಲಾರದಲ್ಲೇ ಸ್ಪರ್ಧಿಸುವಂತೆ ಸಿದ್ದರಾಮಯ್ಯ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು,ಮಾ.21- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದಲೇ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡಬೇಕು ಎಂದು ಆಗ್ರಹಿಸಿ ಬೆಂಗಳೂರಿನಲ್ಲಿಂದು ಸಾವಿರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಶಿವಾನಂದ ವೃತ್ತದಲ್ಲಿರುವ ಸಿದ್ದರಾಮಯ್ಯ ಅವರ ಸರ್ಕಾರಿ ಬಂಗಲೆ ಬಳಿಗೆ ನೂರಾರು ವಾಹನಗಳಲ್ಲಿ ಸ್ವಯಂ ಪ್ರೇರಿತವಾಗಿ ಆಗಮಿಸಿದ ಸಾವಿರಾರು ಕಾರ್ಯಕರ್ತರು ಮುತ್ತಿಗೆ ಹಾಕಿ, ಧರಣಿ ನಡೆಸಿ ಸಿದ್ದರಾಮಯ್ಯ ಅವರನ್ನು ಮನವೋಲಿಸುವ ಯತ್ನ ನಡೆಸಿದರು. ಸಿದ್ದರಾಮಯ್ಯ ಈ ಮೊದಲು ತಾವು ಕೋಲಾರ ಕ್ಷೇತ್ರದಿಂದಲೇ ಸ್ಪರ್ಧೆ ನಡೆಸುವುದಾಗಿ ಘೋಷಿಸಿದ್ದರು. ಈ ನಡುವೆ ದೆಹಲಿಯಲ್ಲಿ ನಡೆದ ಕೇಂದ್ರ ಚುನಾವಣಾ […]

ವಿಧಾನಸೌಧ ಮುತ್ತಿಗೆಗೆ ಯತ್ನಿಸಿದ ಬಿಸಿಯೂಟ ನೌಕರರು ಪೊಲೀಸರ ವಶಕ್ಕೆ

ಬೆಂಗಳೂರು, ಫೆ.15- ಅರ್ನಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ವಿಧಾನಸೌಧ ಮುತ್ತಿಗೆ ಹಾಕಲು ಯತ್ನಿಸಿದ ಬಿಸಿಯೂಟ ನೌಕರರನ್ನು ಪೊಲೀಸರು ವಶಕ್ಕೆ ಪಡೆದು ಕರೆದೋಯ್ದರು. ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 13 ರಿಂದ ಫ್ರೀಡಂ ಪಾರ್ಕ್ನಲ್ಲಿ ಬಿಸಿಯೂಟ ನೌಕರರು ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ಯಾವುದೆ ನಿರ್ಧಾರ ಕೈಗೊಳ್ಳದ ಹಿನ್ನೆಲೆಯಲ್ಲಿ ಇಂದು ವಿಧಾನಸೌಧ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಕಾರ್ಯಕರ್ತೆಯರನ್ನು ವಶಕ್ಕೆ ಪಡೆದಿದ್ದಾರೆ. ನಿವೃತ್ತಿ ಹೊಂದುವ ಅಕ್ಷರ ದಾಸೋಹದ ನೌಕರರಿಗೆ ಒಂದು ಲಕ್ಷ ಇಡುಗಂಟು ನೀಡಬೇಕು. […]

ಬಾಕಿಬಿಲ್ ಬಿಡುಗಡೆ ಮಾಡದಿದ್ದರೆ ರಾಷ್ಟ್ರಪತಿಗಳಿಗೆ ದಯಾಮರಣಕ್ಕೆ ಅರ್ಜಿ

ಬೆಂಗಳೂರು, ಫೆ.14- ಬಾಕಿ ಇರುವ 200 ಕೋಟಿ ಹಣವನ್ನು ಶೀಘ್ರ ಬಿಡುಗಡೆ ಮಾಡದಿದ್ದರೆ ರಾಷ್ಟ್ರಪತಿಗಳಿಗೆ ದಯಾಮರಣ ಕೋರಿ ಅರ್ಜಿ ಸಲ್ಲಿಸಲಾಗುವುದು ಎಂದು ಬಿಬಿಎಂಪಿ ಗುತ್ತಿಗೆದಾರರ ಒಕ್ಕೂಟ ಎಚ್ಚರಿಸಿದೆ. ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿಂದು ಹಣ ಬಿಡುಗಡೆಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿದ ಗುತ್ತಿಗೆದಾರರು ಪಾಲಿಕೆ ಅಕಾರಿಗಳಿಗೆ ಎರಡು ದಿನ ಕಾಲಾವಕಾಶ ನೀಡಲಾಗುವುದು. ಹಣ ಬಿಡುಗಡೆ ಮಾಡದಿದ್ದರೆ ರಾಷ್ಟ್ರಪತಿಗಳಿಗೆ ದಯಾಮರಣ ಅರ್ಜಿ ಸಲ್ಲಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಗುತ್ತಿಗೆದಾರರು ತಿಳಿಸಿದ್ದಾರೆ. ಕೆಆರ್‍ಐಡಿಎಲ್ ಸಂಸ್ಥೆಯಿಂದ ಗುತ್ತಿಗೆ ಪಡೆದು ಕಾಮಗಾರಿ ಪೂರ್ಣಗೊಂಡು ಮೂರು ವರ್ಷ […]

ಕನ್ನಡ ಮಾಧ್ಯಮ ಶಾಲೆಗಳ ಅನುದಾನಕ್ಕಾಗಿ ಪರಿಷತ್ ನಲ್ಲಿ ಪಕ್ಷಾತೀತವಾಗಿ ಧರಣಿ

ಬೆಂಗಳೂರು,ಫೆ.13- ಕನ್ನಡ ಮಾಧ್ಯಮದ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಬೇಕು ಎಂದು ಒತ್ತಾಯಿಸಿ ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನ ಕೆಲ ಸದಸ್ಯರು ಪಕ್ಷಾತೀತವಾಗಿ ಧರಣಿ ನಡೆಸಿದ ಪ್ರಸಂಗ ನಡೆಯಿತು. ಬೋಜನ ವಿರಾಮದ ಬಳಿಕ‌, ನಿಯಮ 330 ರ ಅಡಿ ಗಮನ ಸೆಳೆಯುವ ಸೂಚನೆಯಲ್ಲಿ ಸದಸ್ಯರು 1986-87 ರಿಂದ 1994-95ರ ನಡುವೆ ಪ್ರಾರಂಭವಾಗಿ‌‌ ಸತತವಾಗಿ ನಡೆಯುತ್ತಿರುವ ಎಲ್ಲಾ ಕನ್ನಡ ಮಾಧ್ಯಮ ಶಾಲಾ ಕಾಲೇಜುಗಳನ್ನು ವೇತನಾದಾನಕ್ಕೆ ಒಳಪಡಿಸುವ ವಿಷಯ ಕುರಿತು ಪ್ರಸ್ತಾಪಿಸಿದರು. ಎಸ್.ಎಲ್.ಭೋಜೇಗೌಡ, ಕರ್ನಾಟಕದಲ್ಲಿ ಕನ್ನಡಕ್ಕೆ ಮಾನ್ಯತೆ ಇಲ್ಲವಾಗಿದೆ. […]

ಸರ್ಕಾರಿ ವಿದ್ಯುತ್ ಕಂಪೆನಿಗಳ ಖಾಸಗೀಕರಣ ವಿರೋಧಿಸಿ ಸಿಬ್ಬಂದಿಗಳ ಮುಷ್ಕರ

ಮುಂಬೈ,ಜ.4- ಸರ್ಕಾರಿ ಸ್ವಾಮ್ಯದ ಮೂರು ವಿದ್ಯುತ್ ಕಂಪೆನಿಗಳನ್ನು ಖಾಸಗೀಕರಣಗೊಳಿಸುವುದನ್ನು ವಿರೋಧಿಸಿ, ಕಳೆದ 72 ಗಂಟೆಗಳಿಂದ ಮುಷ್ಕರ ನಡೆಸುತ್ತಿರುವ ಸಿಬ್ಬಂದಿ ಮತ್ತು ಅಧಿಕಾರಿಗಳ ವಿರುದ್ಧ ಮಹಾರಾಷ್ಟ್ರ ಅಗತ್ಯ ಸೇವೆಗಳ ಕಾಯ್ದೆಯನ್ನು ಜಾರಿ ಮಾಡಲು ಸರ್ಕಾರ ಮುಂದಾಗಿದೆ. ಮುಷ್ಕರದಿಂದ ವಿದ್ಯುತ್ ಪೂರೈಕೆಗೆ ಯಾವುದೇ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಿದೆ. ಮೂರು ಸರ್ಕಾರಿ ಕಂಪೆನಿಗಳ ಸಾವಿರಾರು ಸಿಬ್ಬಂದಿಗಳು ಸರ್ಕಾರದ ಕ್ರಮಗಳನ್ನು ವಿರೋಧಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಯೊಂದು ಶಾಖಾ ಕಚೇರಿಯ ಮುಂದೆಯೂ ಪೆಂಡಾಲ್ ಹಾಕಿ ಅಲ್ಲಿ ಧರಣಿ […]

ಕೊಲ್ಲಾಪುರ ಸಂಸದ ಧೈರ್ಯಶೀಲ ಮಾನೆಗೆ ಬೆಳಗಾವಿ ಪ್ರವೇಶ ನಿಷೇಧ..!

ಬೆಳಗಾವಿ,ಡಿ.19-ಮಹಾರಾಷ್ಟ್ರ ಗಡಿ ಸಲಹಾ ಸಮಿತಿ ಅಧ್ಯಕ್ಷ ಹಾಗೂ ಕೊಲ್ಲಾಪುರ ಸಂಸದ ಧೈರ್ಯಶೀಲ ಮಾನೆ ಅವರಿಗೆ ಬೆಳಗಾವಿ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಕಾರಿ ನಿತೇಶ್ ಪಾಟೀಲ್ ನಿಷೇದಾಜ್ಞೆ ಹೊರಡಿಸಿದ್ದಾರೆ. ಸಿಆರ್‍ಪಿಸಿ ಕಲಂ 144(3)ಅನ್ವಯ ಜಿಲ್ಲಾಕಾರಿಗಳು ಇದೀಗ ನಿಷೇಧ ಹೇರಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡಲು, ಜನರ ಆಸ್ತಿಪಾಸ್ತಿ ಹಾನಿ ತಪ್ಪಿಸುವ ಉದ್ದೇಶದಿಂದ ಈ ಸಿಆರ್‍ಪಿಸಿ ಅನ್ವಯವಾಗಲಿದೆ. ಕತಾರ್ ವಿಶ್ವಕಪ್‍ನಲ್ಲಿ ಅತಿ ಹೆಚ್ಚು ಗೋಲು, ಹೊಸ ದಾಖಲೆ ಬೆಳಗಾವಿಯಲ್ಲಿ ಇಂದಿನಿಂದ ಕರ್ನಾಟಕ ವಿಧಾನಮಂಡಲದ ವಿಶೇಷ ಅವೇಶನ ಆರಂಭವಾಗಲಿದೆ. ಅಂದೇ ಮಹಾರಾಷ್ಟ್ರ ಏಕೀಕರಣ ಸಮಿತಿ […]

ನಾಳೆಯಿಂದ ಬೆಳಗಾವಿ ಅಧಿವೇಶನ, ಪ್ರತಿಭಟನೆಗೆ ಸಜ್ಜಾದ ವಿವಿಧ ಸಂಘಟನೆಗಳು

ಬೆಳಗಾವಿ,ಡಿ.18- ಬೆಳಗಾವಿ ಅಧಿವೇಶನ ಎಂದರೆ ಪ್ರತಿಭಟನೆಗಳು ಪ್ರಮುಖವಾಗಿ ಎದ್ದು ಕಾಣಿಸುತ್ತಿವೆ. ಈ ಹಿಂದಿನ ಅಧಿವೇಶನದ ಸಂದರ್ಭದಲ್ಲಿ ಹಲವು ಪ್ರತಿಭಟನೆಗಳು ನಡೆದಿರುವ ನಿದರ್ಶನಗಳಿವೆ. ಈ ಬಾರಿಯೂ ಪ್ರತಿಭಟನೆಗೆ ಅವಕಾಶ ಕೋರಿ ವಿವಿಧ ಸಂಘಟನೆಗಳು ಜಿಲ್ಲಾಡಳಿತದ ಬಳಿ ತಮ್ಮ ಸಂಘಟನೆಗಳ ಹೆಸರನ್ನು ನೋಂದಾಯಿಸಿಕೊಂಡಿವೆ. ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಪ್ರತಿಭಟನೆ ನಡೆಸಿ ಅವುಗಳನ್ನು ಸರಕಾರದ ಗಮನಕ್ಕೆ ತಂದು ತಮ್ಮ ಬಹುದಿನಗಳ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ಸಂಘಟನೆಗಳು ಇದೀಗ ಸಜ್ಜಾಗುತ್ತಿದ್ದು ಆಯಾ ಸಂಘಟನೆಗಳ ಕಾರ್ಯಕರ್ತರು ಬೆಳಗಾವಿಯತ್ತ ಧಾವಿಸುತ್ತಿರುವುದು ವಿಶೇಷವಾಗಿದೆ. ನ್ಯೂಯಾರ್ಕ್ : ಅಗ್ನಿ ಅವಘಡದಲ್ಲಿ […]

ವಿದ್ಯುತ್ ಗುತ್ತಿಗೆದಾರರಿಂದ ಬೃಹತ್ ಪ್ರತಿಭಟನೆ

ಬೆಂಗಳೂರು, ಡಿ.5- ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ವತಿಯಿಂದ ಹಲವಾರು ಬೇಡಿಕೆಗಳನ್ನು ಅಗ್ರಹಿಸಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಲಾಯಿತು. ವಿದ್ಯುತ್ ಮೀಟರ್ ಮತ್ತು ಉಪಕರಣಗಳನ್ನು ಕುತ್ತಿಗೆಗೆ ಹಾಕಿಕೊಂಡು ಸರ್ಕಾರದ ಧೋರಣೆಯನ್ನು ಖಂಡಿಸಿದರು. ಈ ವೇಳೆ ಸಂಘದ ಅಧ್ಯಕ್ಷ ಸಿ.ರಮೇಶ್ ಮಾತನಾಡಿ, ಕರ್ನಾಟಕ ರಾಜ್ಯ ವಿದ್ಯುತ್ ಗುತ್ತಿಗೆದಾರರ ಸಂಘಕ್ಕೆ ನೂರು ವರ್ಷಗಳ ಇತಿಹಾಸವಿದೆ. ರಾಜ್ಯದಲ್ಲಿ 30 ಸಾವಿರ ವಿದ್ಯುತ್ ಗುತ್ತಿಗೆದಾರರು ಇದ್ದು, ಅವರನ್ನು ನಂಬಿಕೊಂಡು 10 ಲಕ್ಷ ಜನರು ಕೆಲಸ ಮಾಡುತ್ತಿದ್ದಾರೆ. ಈ ನಡುವೆ […]