ರಸ್ತೆಗುಂಡಿ ಮುಚ್ಚುವಂತೆ ಜೆಸಿಬಿ ತಡೆದು ಸ್ಥಳೀಯರ ಪ್ರತಿಭಟನೆ

ಬೆಂಗಳೂರು, ನ.15- ರಾಜಾಜಿನಗರದ ಎರಡನೆ ಹಂತದ ಡಿ ಬ್ಲಾಕ್‍ನ ಗುಂಡಿಬಿದ್ದ ರಸ್ತೆಯಿಂದ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಹಿನ್ನೆಲೆಯಲ್ಲಿ ರಸ್ತೆ ದುರಸ್ತಿಗೆ ಆಗ್ರಹಿಸಿ ಸ್ಥಳೀಯರು ರಸ್ತೆ ಮಧ್ಯೆ ಜೆಸಿಬಿ ನಿಲ್ಲಿಸಿ ಪ್ರತಿಭಟನೆ ನಡೆಸಿದರು. ಕೆಲಸದ ನಿಮಿತ್ತ ತೆರಳುತ್ತಿದ್ದ ಮರಿಯಪ್ಪನಪಾಳ್ಯದ ನಿವಾಸಿ ಕುಮಾರ್ ಎಂಬುವವರು ಮೃತಪಟ್ಟಿದ್ದಾರೆ. ಇದಕ್ಕೆ ಬಿಬಿಎಂಪಿ ಹಾಗೂ ಸರ್ಕಾರವೇ ನೇರ ಕಾರಣ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ ಸ್ಥಳೀಯರು ಗುತ್ತಿಗೆದಾರರು ಹಾಗೂ ಪಾಲಿಕೆ ಎಂಜಿನಿಯರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ರಸ್ತೆ ದುರಸ್ತಿ ಮಾಡುವಂತೆ ಆಗ್ರಹಿಸಿದ್ದಾರೆ. […]