ಬ್ರೇಕಿಂಗ್: PU ಕಾಲೇಜುಗಳಲ್ಲಿ ಸಾಮೂಹಿಕ ರಾಷ್ಟ್ರಗೀತೆ ಕಡ್ಡಾಯಗೊಳಿಸಿ ಸರ್ಕಾರ ಆದೇಶ

ಬೆಂಗಳೂರು, ಆ.18- ಇನ್ನು ಮುಂದೆ ಸರ್ಕಾರಿ, ಅನುದಾನ, ಅನುದಾನ ರಹಿತ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರತಿದಿನ ಸಾಮೂಹಿಕ ಪ್ರಾರ್ಥನೆಯ ವೇಳೆಯಲ್ಲಿ ರಾಷ್ಟ್ರಗೀತೆ ಹಾಡಿಸುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶದಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲಾ-ಕಾಲೇಜುಗಳಲ್ಲಿ (1-12) ಕಡ್ಡಾಯವಾಗಿ ರಾಷ್ಟ್ರಗೀತೆ ಹಾಡಬೇಕು, ಸಾಮೂಹಿಕ ಪ್ರಾರ್ಥನೆ ಮಾಡಲು ಸ್ಥಳಾವಕಾಶವಿಲ್ಲದೆ ಹೋದರೆ ಶಾಲಾ ಕೊಠಡಿಗಳಲ್ಲೆ ರಾಷ್ಟ್ರಗೀತೆ ಹಾಡಿಸುವಂತೆ ತಿಳಿಸಿದೆ. ಜೊತೆಗೆ ಯಾವುದೇ ಕಾರಣಕ್ಕೂ ರಾಷ್ಟ್ರಗೀತೆಗೆ ಅಪಚಾರ ಆಗದಂತೆ ನೋಡಿಕೊಳ್ಳುವಂತೆಯೂ ಸೂಚಿಸಲಾಗಿದೆ.ಕರ್ನಾಟಕದ ಕೆಲವು […]

ಕಾಲೇಜುಗಳಲ್ಲಿ ಹಿಜಾಬ್ – ಕೇಸರಿ ಶಾಲು ವಿವಾದ: ಸಮವಸ್ತ್ರ ನೀತಿ ಜಾರಿಗೆ ಸಮಿತಿ ರಚನೆ

ಬೆಂಗಳೂರು,ಫೆ.4- ಪಿಯು ಕಾಲೇಜುಗ ಳಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ರಾಜ್ಯದಲ್ಲಿ ಬಿಸಿ-ಬಿಸಿ ಚರ್ಚೆಗೆ ಕಾರಣ ವಾಗಿದೆ. ಇದಕ್ಕೆ ಕಡಿವಾಣ ಹಾಕಲು ಶಿಕ್ಷಣ ಇಲಾಖೆ ಮುಂದಾಗಿದೆ. ಕರ್ನಾಟಕ ಸರ್ಕಾರ ಪಿಯುಸಿ ಕಾಲೇಜುಗಳಲ್ಲಿ ಸಮವಸ್ತ್ರ ಜಾರಿಗೆ ತರಲು ಚಿಂತನೆ ನಡೆಸುತ್ತಿದೆ. ಹಿಜಾಬ್ ವಿವಾದದ ಕುರಿತು ಕರ್ನಾಟಕ ಹೈಕೋರ್ಟ್ನ ಅರ್ಜಿ ವಿಚಾರಣೆಗೆಗಾಗಿ ಕಾಯಲಾಗುತ್ತಿದೆ. ಕರ್ನಾಟಕ ಹೈಕೋರ್ಟ್ ನೀಡುವ ಆದೇಶದ ಬಳಿಕ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಸಮವಸ್ತ್ರ ನೀತಿ ಜಾರಿಗೊಳಿಸಲು ಸಮಿತಿ ರಚನೆ ಮಾಡಲಾಗುತ್ತದೆ. ಈ ಮೂಲಕ ಹಿಜಾಬ್, ಕೇಸರಿ […]