ಶಾಲಾ ಪಠ್ಯದಲ್ಲಿ ಅಪ್ಪು ಸಾಧನೆ ಸೇರ್ಪಡೆ : ಸಿಎಂ

ಬೆಂಗಳೂರು,ನ.1- ಅಭಿಮಾನಿಗಳ ಕೋರಿಕೆ ಯಂತೆ ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಜೀವನ ಚರಿತ್ರೆಯನ್ನೊಳಗೊಂಡ ಪಠ್ಯವನ್ನು ಶಾಲಾ ಪಠ್ಯ ಪುಸ್ತಕದಲ್ಲಿ ಸೇರ್ಪಡೆ ಮಾಡುವ ಕುರಿತು ಹಂತ ಹಂತವಾಗಿ ಕ್ರಮ ತೆಗೆದು ಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುನೀತ್ ರಾಜ್ಕುಮಾರ್ ಅವರ ಜೀವನ ಚರಿತ್ರೆಯನ್ನು ಪಠ್ಯ ಪುಸ್ತಕದಲ್ಲಿ ಸೇರ್ಪಡೆ ಮಾಡಿ ಅವರ ಸಾಧನೆಯನ್ನು ಮುಂದಿನ ಪೀಳಿಗೆಗೆ ತಿಳಿಸಬೇಕು ಎಂಬುದು ಎಲ್ಲರ ಅಭಿಲಾಷೆಯಾಗಿದೆ. ಅದಕ್ಕಾಗಿ ಏನೆಲ್ಲ ಸಾಧ್ಯವೋ ಅದೆಲ್ಲವನ್ನು ನಮ್ಮ ಸರ್ಕಾರ ಮಾಡಲಿದೆ ಎಂದು […]