ಸರ್ಕಾರಿ ಶಾಲೆಗಳ ಮಕ್ಕಳು ಅಭಿವೃದ್ಧಿಪಡಿಸಿದ ಉಪಗ್ರಹಕ್ಕೆ ಪುನೀತ್ ರಾಜಕುಮಾರ್ ಹೆಸರು

ಬೆಂಗಳೂರು,ಫೆ.28- ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸರ್ಕಾರಿ ಶಾಲೆಗಳ ಮಕ್ಕಳೇ ಉಪಗ್ರಹ ಅಭಿವೃದ್ಧಿ ಮಾಡಲಿದ್ದು, ಇದಕ್ಕೆ ಯುವಕರ ಕಣ್ಮಣಿ ನಟ ಪುನೀತ್ ರಾಜಕುಮಾರ್ ಅವರ ಹೆಸರನ್ನೇ ಇಡಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಮಲ್ಲೇಶ್ವರಂನ 18ನೇ ಅಡ್ಡರಸ್ತೆಯಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೊತ್ಸಾಹಕ ಸೊಸೈಟಿ (ಕೆಸ್ಟೆಪ್ಸ್) ಮತ್ತು ಭಾರತೀಯ ತಂತ್ರಜ್ಞಾನ ಸಮಾವೇಶ ಒಕ್ಕೂಟ (ಐಟಿಸಿಎ) ಮಾಡಿಕೊಂಡ […]