ಬಿಬಿಎಂಪಿ ಆವರಣದಲ್ಲಿ ಪ್ರತಿಷ್ಠಾಪನೆಯಾಗಲಿದೆ ಅಪ್ಪು ಮೊದಲ ಕಂಚಿನ ಪುತ್ಥಳಿ

ಬೆಂಗಳೂರು, ಜ.8-ಪವರ್‍ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ಮೊದಲ ಕಂಚಿನ ಪುತ್ಥಳಿ ಬಿಬಿಎಂಪಿಯ ಕೇಂದ್ರ ಕಚೇರಿ ಆವರಣದಲ್ಲಿ ಪ್ರತಿಷ್ಠಾಪನೆಗೊಳ್ಳಲಿದೆ. ಕೇಂದ್ರ ಕಚೇರಿ ಆವರಣದಲ್ಲಿರುವ ಡಾ.ರಾಜ್‍ಕುಮಾರ್ ಗಾಜಿನ ಮನೆ ಮುಂಭಾಗವಿರುವ ಮೇಯರ್ ಮುತ್ತಣ್ಣ ಡಾ.ರಾಜ್‍ಕುಮಾರ್ ಪ್ರತಿಮೆ ಪಕ್ಕದಲ್ಲಿ ಪವರ್ ಸ್ಟಾರ್ ಪುನಿತ್ ರಾಜ್‍ಕುಮಾರ್ ಅವರ ಪ್ರತಿಮೆ ಪ್ರತಿಷ್ಠಾಪಿಸಲು ಬಿಬಿಎಂಪಿ ಅಡಳಿತಾಧಿಕಾರಿ ರಾಕೇಶ್ ಸಿಂಗ್ ಅವರು ಅನುಮತಿ ನೀಡಿದ್ದಾರೆ. ಪುನಿತ್‍ರಾಜ್‍ಕುಮಾರ್ ಅವರ ಅಕಾಲಿಕ ನಿಧನದ ನಂತರ ಬೆಂಗಳೂರು ಮಹಾನಗರ ಪಾಲಿಕೆ ನೌಕರರ ಕನ್ನಡ ಸಂಘದ ಪದಾಕಾರಿಗಳು ಪುನಿತ್ ಅವರ ಪ್ರತಿಮೆ ಅನಾವರಣಕ್ಕೆ […]