ಶಿವಸೇನೆ ಪಕ್ಷದ ಶಿರ್ಷಿಕೆ, ಚಿನ್ಹೆ ಖರೀದಿಗೆ 2 ಸಾವಿರ ಕೋಟಿ ಒಳ ಒಪ್ಪಂದ

ಮುಂಬೈ,ಫೆ.19- ಶಿವಸೇನೆ ಪಕ್ಷದ ಚಿನ್ಹೆಯಾದ ಬಿಲ್ಲು ಮತ್ತು ಬಾಣ ಹೆಗ್ಗುರತನ್ನು ಖರೀದಿಸಲು ಸುಮಾರು ಎರಡು ಸಾವಿರ ಕೋಟಿ ರೂಪಾಯಿಗಳ ಒಳ ಒಪ್ಪಂದ ನಡೆದಿದೆ ಎಂದು ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಗಂಭೀರ ಆರೋಪ ಮಾಡಿದ್ದಾರೆ. ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಬಣದ ನಾಯಕರೂ ಆಗಿರುವ ಸಂಜಯ್ ರಾವುತ್‍ರ ಆರೋಪವನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಣದ ಶಾಸಕ ಸದಾ ಸರ್ವಂಕರ್ ತಳ್ಳಿ ಹಾಕಿದ್ದಾರೆ. ಅಷ್ಟು ದೊಡ್ಡ ಮೊತ್ತದ ಹಣಕ್ಕೆ ಸಂಜಯ್ ರಾವುತ್ ಕ್ಯಾಷಿಯರ್? ಆಗಿದ್ದರೆ ಎಂದು […]

ಮದ್ಯ ಖರೀದಿ ವಯೋಮಿತಿ ಸಡಿಲಿಕೆ ಮಾಡದಿರಲು ಸರ್ಕಾರ ತೀರ್ಮಾನ

ಬೆಂಗಳೂರು,ಜ.18- ಸಾರ್ವಜನಿಕ ವಲಯ ಹಾಗೂ ವಿದ್ಯಾರ್ಥಿ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮದ್ಯ ಖರೀದಿಗೆ ನಿಗದಿಪಡಿಸಿದ್ದ ವಯೋಮಿತಿಯನ್ನು ಸಡಿಲಿಕೆ ಮಾಡದಿರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಹಿಂದೆ ಅಬಕಾರಿ ಇಲಾಖೆಯು ಮದ್ಯ ಖರೀದಿಗೆ ನಿಗದಿ ಮಾಡಿದ್ದ ವಯೋಮಿತಿಯನ್ನು 21ರಿಂದ 18ವರೆಗೆ ಇಳಿಕೆ ಮಾಡಲು ನಿರ್ಧರಿಸಿ ಸಾರ್ವಜನಿಕರಿಂದ ಅಭಿಪ್ರಾಯಗಳನ್ನು ಕೋರಲಾಗಿತ್ತು. ಆದರೆ ಈ ನಿರ್ಧಾರಕ್ಕೆ ಭಾರೀ ವಿರೋಧ ವ್ಯಕ್ತವಾಗಿ ಸರ್ಕಾರವೇ ಯುವಜನತೆಯನ್ನು ಮದ್ಯಪಾನಕ್ಕೆ ಪ್ರೋತ್ಸಾಹಿಸಲು ಕುಮ್ಮಕ್ಕು ನೀಡುತ್ತಿದೆ ಎಂದು ಚಿಂತಕರು, ಸಾಹಿತಿಗಳು, ವಿದ್ಯಾರ್ಥಿ ಸಂಘಟನೆಗಳು ಮತ್ತಿತರರು ವಿರೋಧ […]

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ವಿದ್ಯುತ್ ಖರೀದಿ ಅಕ್ರಮ : ಸಮಗ್ರ ತನಿಖೆಗೆ ಸಿದ್ಧತೆ

ಬೆಂಗಳೂರು,ಆ.20-ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯ ವೇಳೆ ವಿದ್ಯುತ್ ಖರೀದಿಯಲ್ಲಿ ವ್ಯಾಪಕ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದ್ದು, ಇದನ್ನು ಸಮಗ್ರವಾಗಿ ತನಿಖೆ ನಡೆಸಲು ಇಂಧನ ಇಲಾಖೆ ಮುಂದಾಗಿದೆ. ಮುಂದಿನ ವಾರ ಇಂಧನ ಇಲಾಖೆಯಿಂದ ತನಿಖೆಗೆ ಅಧಿಕೃತ ಆದೇಶ ಹೊರಬೀಳಲಿದ್ದು, ಪ್ರಮುಖ ನಾಯಕರಿಗೆ ತನಿಖೆಯ ಬಿಸಿ ಎದುರಾಗುವ ಸಾಧ್ಯತೆ ಇದೆ. ಈ ಮೂಲಕ 2023ರ ವಿಧಾನಸಭೆ ಚುನಾವಣೆಗೂ ಮುನ್ನವೇ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಮತ್ತೊಂದು ಸುತ್ತಿನ ರಾಜಕೀಯ ಸಂಘರ್ಷ ಏರ್ಪಡುವುದು ಬಹುತೇಕ ಖಚಿತವಾಗಿದೆ. ಕೇಂದ್ರ ಸರ್ಕಾರ ನಿಗದಿಪಡಿಸಿದ್ದ ದರವನ್ನು […]