ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ ಬೆಂಕಿ ಅವಘಡ

ಪುರಿ,(ಒಡಿಶಾ), ಮಾ.9 – ನಗರದ ಪ್ರಮುಖ ವ್ಯಾಪಾರ ಕಾಂಪ್ಲೆಕ್ಸ್‍ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿ ಅಲ್ಲಿದ್ದ ಎಲ್ಲಾ 40 ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಕಳೆದ ರಾತ್ರಿ ಲಕ್ಷೀ ಕಾಂಪ್ಲೆಕ್ಸ್ ನ ಮೊದಲ ಮಹಡಿಯಲ್ಲಿರುವ ಬಟ್ಟೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಅದು ಕಟ್ಟಡ ಪೂರ್ತಿ ವ್ಯಾಪಿಸಿ ಎಲ್ಲವನ್ನು ನಾಶಪಡಿಸಿದೆ. ಬೆಂಕಿ ನಂದಿಸಲು ಹನ್ನೆರಡು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಕಾಂಪ್ಲೆಕ್ಸ್ ನಲ್ಲಿದ್ದ ಸುಮಾರು 100ಕ್ಕೂ ಹೆಚ್ಚು ಜನರನ್ನು ರಕ್ಷಿಸಿದೆ. ಕಟ್ಟಡದಿಂದ ಹೊರಬರಲಾಗದೆ ಮೇಲ್ಛಾವಣಿಯ ಮೇಲೆ ಸಿಲುಕಿ ಪ್ರಜ್ಞಾಹೀನ ಸ್ಥಿತಿಯಲಿದ್ದ […]

ಮಗಳನ್ನು ಬರ್ಬರ ಹತ್ಯೆ ಮಾಡಿದ ತಂದೆ ಮತ್ತು ಮಲತಾಯಿ

ಪುರಿ,(ಒಡಿಶಾ).ಜ.11-ತಂದೆ ಮತ್ತು ಮಲತಾಯಿ ಸೇರಿಕೊಂಡು 17 ವರ್ಷದ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಿ ರಾತ್ರೋರಾತ್ರಿ ಮೃತದೇಹವನ್ನು ಸುಟ್ಟುಹಾಕಿರುವ ಘಟನೆ ಪುರಿ ಜಿಲ್ಲೆಯ ಗೋಪ್ ಪ್ರದೇಶದಲ್ಲಿ ಬಳಕಿಗೆ ಬಂದಿದೆ. ಮೃತಳನ್ನು ಸೊನಾಲಿ ಮೊಹರಾಣ ಎಂದು ಗುರುತಿಸಲಾಗಿದೆ. ಆಕೆಯ ಹಿರಿಯ ಸಹೋದರಿ ರಂಜಿತಾ ಮೊಹರಾಣ ನೀಡಿದ ದೂರಿನ ಆಧಾರದ ಮೇಲೆ ಗೋಪ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ತಂದೆ ದುರ್ಗಾಚರಣ ಮೊಹರಾಣನನ್ನು ಬಂಧಿಸಿದ್ದಾರೆ. ಮೂಲಗಳ ಪ್ರಕಾರ 2018ರಲ್ಲಿ ದುರ್ಗಾಚರಣ್‍ನ ಮೊದಲ ಹೆಂಡತಿ ಮೃತಪಟ್ಟಿದ್ದರು ನಂತರ 2020ರಲ್ಲಿ ಮಮತಾ ಓಜಾ […]

ಪುರಿ ಜಗನ್ನಾಥ ದೇಗುಲದಲ್ಲಿ ಬೆಂಕಿ ಅವಘಡ

ಪುರಿ, ಆ. 7- ವಿಶ್ವ ಪ್ರಸಿದ್ಧ ಪುರಿ ಜಗನ್ನಾಥ ದೇಗುಲದಲ್ಲಿ ಕಳೆದ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ್ದರೂ ಕೂಡ ಅನಾಹುತವನ್ನು ತಪ್ಪಿಸುವಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಕಳೆದ ತಡರಾತ್ರಿ ಜಗನ್ನಾಥ ದೇಗುಲದ ಸಾರಾ ಗರಾ (ಅಡುಗೆ ಮನೆ)ದಲ್ಲಿ ಬೆಂಕಿ ಕಾಣಿಸಿಕೊಂಡಿದೆ, ದೇಗುಲದ ಸಿಬ್ಬಂದಿಗಳು ತಕ್ಷಣ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ, ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿಗಳು ಬೆಂಕಿ ನಂದಿಸಿ ಭಾರೀ ದುರಂತ ತಪ್ಪಿಸಿದ್ದಾರೆ. ಅಗ್ನಿಶಾಮಕದಳದ ಸಮಯಪ್ರಜ್ಞೆಯಿಂದಾಗಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಸಾರಾಗರಾದಲ್ಲಿ […]