ವಿದ್ಯಾರ್ಹತೆಗೆ ತಕ್ಕ ಉದ್ಯೋಗ : ಗೋಪಾಲಯ್ಯ ಭರವಸೆ

ಬೆಂಗಳೂರು,ಫೆ.5- ಮಹಾಲಕ್ಷ್ಮಿಲೇಔಟ್‍ನಲ್ಲಿ ಹಮ್ಮಿಕೊಂಡಿದ್ದ ಉದ್ಯೋಗ ಮೇಳದಲ್ಲಿ ನೂರಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿದ್ದು, ವಿದ್ಯಾರ್ಹತೆಗೆ ತಕ್ಕ ಉದ್ಯೋಗ ನೀಡಲಾಗುತ್ತದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದರು. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯ ಮಿಷನ್ ಹಾಗೂ ಶ್ರೀಮಹಾಲಕ್ಷ್ಮಿ ಎಜುಕೇಷನಲ್ ಟ್ರಸ್ಟ್ ವತಿಯಿಂದ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಬೋವಿಪಾಳ್ಯದ ಬಿಜಿಎಸ್ ಕಾಲೇಜು ಕ್ಯಾಂಪಸ್ ನಲ್ಲಿ ಆಯೋಜಿಸಿದ್ದ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕುತೂಹಲ ಕೆರಳಿಸಿದ ಬೊಮ್ಮಾಯಿ ಹಾಗೂ […]