ಸರ್ಕಾರಿ ಭೂ ಮಂಜೂರಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು, ಫೆ.16- ಸರ್ಕಾರಿ ಭೂಮಿ ಮಂಜೂರಾತಿಗೆ ಅರ್ಜಿ ಸಲ್ಲಿಸುವ ಕಾಲಾವಧಿಯನ್ನು ಒಂದು ವರ್ಷಗಳ ಕಾಲ ವಿಸ್ತರಣೆ ಮಾಡುವ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೂಲಿಬೆಲೆ ಹೊಬಳಿ ಶಾಂತಗ್ರಾಮದ ಭೂ ಅಕ್ರಮಗಳನ್ನು ಭ್ರಷ್ಟಾಚಾರ ನಿಗ್ರಹ ದಳದಿಂದ ತನಿಖೆ ನಡೆಸುವ ಮಹತ್ವದ ನಿರ್ಣಯಗಳನ್ನು ಕಂದಾಯ ಸಚಿವ ಆರ್.ಅಶೋಕ್ ವಿಧಾನ ಪರಿಷತ್ ನಲ್ಲಿಂದು ಘೋಷಣೆ ಮಾಡಿದರು. ಪ್ರತಿಪಕ್ಷಗಳ ಧರಣಿಯ ನಡುವೆಯೇ ಸಭಾಪತಿ ಅವರು ಪ್ರಶ್ನೋತ್ತರ ಕಲಾಪವನ್ನು ಕೈಗೆತ್ತಿಕೊಂಡರು. ಕಾಂಗ್ರೆಸ್ ಸದಸ್ಯರು ಧರಣಿ ನಡೆಸುತ್ತಿದ್ದರಿಂದ ಪ್ರಶ್ನೋತ್ತರದಿಂದ ದೂರ ಉಳಿದು, ಸಚಿವ ಈಶ್ವರಪ್ಪ ವಿರುದ್ಧ ಘೋಷಣೆ […]