ಚಾಮರಾಜಪೇಟೆ ಮೈದಾನಕ್ಕೆ ಸಚಿವ ಅಶೋಕ್ ಭೇಟಿ, ಪರಿಶೀಲನೆ

ಬೆಂಗಳೂರು,ಆ.13- ಇದೇ ಸೋಮವಾರದಂದು ಚಾಮರಾಜಪೇಟೆ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಪ್ರಥಮ ಬಾರಿಗೆ ಧ್ವಜಾರೋಹಣ ನಡೆಸುತ್ತಿರುವ ಹಿನ್ನಲೆಯಲ್ಲಿ ಅಗತ್ಯ ಮುಂಜಾಗ್ರತೆ ಕೈಗೊಳ್ಳಬೇಕೆಂದು ಕಂದಾಯ ಸಚಿವ ಆರ್.ಅಶೋಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಇಂದು ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಸಂಸದ ಪಿ.ಸಿ.ಮೋಹನ್, ಬಿಬಿಎಂಪಿ, ಗೃಹ, ಕಂದಾಯ ಸೇರಿದಂತೆ ಮತ್ತಿತರ ಅಧಿಕಾರಿಗಳ ಜೊತೆ ಸ್ಥಳಕ್ಕೆ ಭೇಟಿ ಕೊಟ್ಟು ಭದ್ರತೆಯ ಬಗ್ಗೆ ಪರಿಶೀಲನೆ ನಡೆಸಿದರು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ಇದೇ ಮೊದಲ ಬಾರಿಗೆ ಚಾಮರಾಜಪೇಟೆಯ ಮೈದಾನದಲ್ಲಿ ಸ್ವಾತಂತ್ರ್ಯ ದಿನಾ ಚರಣೆ […]