ಕೆಪಿಸಿಸಿ ಕಾರ್ಯಧ್ಯಕ್ಷ ಆರ್. ಧೃವ ನಾರಾಯಣ್ ನಿಧನ

ಮೈಸೂರು: ಕೆಪಿಸಿಸಿ ಕಾರ್ಯಧ್ಯಕ್ಷ ಆರ್. ಧೃವ ನಾರಾಯಣ್ ಅವರು ಶನಿವಾರ ಬೆಳಗ್ಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶುಕ್ರವಾರ ಸಂಜೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ರಾತ್ರಿ ಅವರು ಮನೆಗೆ ಆಗಮಿಸಿದ್ದರು. ಮಧ್ಯರಾತ್ರಿ ಇದಕ್ಕಿದಂತೆ ತೀವ್ರತರನಾದ ಎದೆ ನೋವು ಕಾಣಿಸಿಕೊಂಡಿತ್ತು, ತಕ್ಷಣ ಅವರನ್ನು ಮೈಸೂರಿನ ಒಂಟಿಕೊಪ್ಪಲ್ಲಿನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮುಂಜಾನೆ 5.30ರ ವೇಳೆ ಕೊನೆಯುಸಿರೆಳೆದಿದ್ದಾರೆ. ಧ್ರುವನಾರಾಯಣ್ ಅವರಿಗೆ ಈಗಿನ್ನು 61 ವರ್ಷಗಳು. ಕಾಂಗ್ರೆಸ್ ಪಕ್ಷದಲ್ಲಿ ಕಾರ್ಯಾಧ್ಯಕ್ಷರಾಗಿ ಸದಾ ಚಟುವಟಿಕೆಯಿಂದ ಕೆಲಸ ನಿರ್ವಹಿಸುತ್ತಿದ್ದರು. ಧ್ರುವನಾರಾಯಣ್ […]