ಪರಿಷತ್ ಸದಸ್ಯ ಶಂಕರ್ ನಿವಾಸದ ಮೇಲೆ ವಾಣಿಜ್ಯ ತೆರಿಗೆ ದಾಳಿ

ಹಾವೇರಿ,ಮಾ.15- ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆ ವಿಧಾನಪರಿಷತ್ ಸದಸ್ಯ ಆರ್.ಶಂಕರ್ ಅವರ ರಾಣೇಬೆನ್ನೂರಿನ ಬೀರಲಿಂಗೇಶ್ವರ ನಗರದ ಮನೆ ಮೇಲೆ ಮಂಗಳವಾರ ತಡರಾತ್ರಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಂಕರ್‍ ಅವರ ಗೃಹ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕರಿಗೆ ವಿತರಣೆ ಮಾಡಲು ಸಂಗ್ರಹಿಸಿಟ್ಟಿದ್ದ ಶಂಕರ್‍ ಭಾವಚಿತ್ರ ಇರುವ ಸೀರೆ ಬಾಕ್ಸ್, ತಟ್ಟೆ ಲೋಟ ಹಾಗೂ ಎಲ್‍ಕೆಜಿಯಿಂದ ಪದವಿ ಕಾಲೇಜುಗಳವರೆಗೆ ಹಂಚಲು ತಂದಿರುವ ಸ್ಕೂಲ್‍ಬ್ಯಾಗ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಹಾವೇರಿ ಉಪವಿಭಾಗಧಿಕಾರಿ ದಾಖಲೆ ಪತ್ರ, ಬಿಲ್ ಮತ್ತು ಸ್ಟಾಕ್ ಚೆಕ್‍ಗಳನ್ನು ಅಧಿಕಾರಿಗಳು ಪರಿಶೀಲನೆ […]