ಕೆಲಸ ಕೊಡಿಸುವ ನೆಪದಲ್ಲಿ ಬಾಲಕಿ ಮೇಲೆ ನಿರಂತರ ಅತ್ಯಾಚಾರ

ಕೊಚ್ಚಿ,ನ.18- ಕೆಲಸ ಕೊಡಿಸುವ ನೆಪದಲ್ಲಿ ಮನೆಬಿಟ್ಟು ಓಡಿ ಬಂದ 17 ವರ್ಷದ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಮಾಡಿ ವೇಶ್ಯಾವಾಟಿಕೆಗೆ ದೂಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿಯನ್ನು ಬಂಧಿಸಲಾಗಿದೆ. ಕೇರಳದ ತ್ರಿಶೂರ್ ಜಿಲ್ಲೆಗೆ ಸೇರಿದ ಬಾಲಕಿ ಕೆಲಸಹರಸಿ ಮನೆಬಿಟ್ಟು ಕೊಚ್ಚಿಗೆ ಬಂದಿದ್ದಳು. ಆರೋಪಿಗಳಲ್ಲಿ ಒಬ್ಬ ಯುವಕ ಈಕೆಯನ್ನು ಪುಸಲಾಯಿಸಿ ಸ್ನೇಹ ಬೆಳೆಸಿಕೊಂಡು ಕೆಲಸ ಕೊಡಿಸುವುದಾಗಿ ನಂಬಿಸಿದ್ದ. ನಂತರ ಈಕೆಯನ್ನು ಕೆಲಸದ ನೆಪದಲ್ಲಿ ಲಾಡ್ಜ್‍ಗೆ ಕರೆದೊಯ್ದು ಕೂಲ್ ಡ್ರಿಂಕ್ಸ್‍ನಲ್ಲಿ ನಿದ್ದೆ ಮಾತ್ರೆ ಹಾಕಿ ಕುಡಿಸಿ ಅತ್ಯಾಚಾರ ಎಸಗಿದ್ದಾನೆ. ಬಳಿಕ […]

ನಿಲ್ಲದ ಮಟ್ಕಾ ದಂಧೆ, ಇನ್ಸ್ಪೆಕ್ಟರ್ ಅಮಾನತು

ತುಮಕೂರು.ಜು.14-ಮಟ್ಕಾದಂಧೆ ನಿಯಂತ್ರಿಸಲು ವಿಫಲವಾದ ಪಾವಗಡ ಠಾಣೆ ಇನ್ ಸ್ಪೆಕ್ಟರ್ ಲಕ್ಷ್ಮೀಕಾಂತ್ ಅವರನ್ನು ಅಮಾನತುಗೊಳಿಸಿ ಎಸ್ಪಿ ರಾಹುಲ್ ಕುಮಾರ್ ಶಹಪೂರವಾಡ್ ಆದೇಶಿಸಿದ್ದಾರೆ. ಮಟ್ಕಾ ದಂಧೆಗೆ ಕಡಿವಾಣ ಹಾಕಬೇಕಾದ ಪೊಲೀಸ್ ಸಿಬ್ಬಂದಿಯೇ ಮಟ್ಕಾ ದಂಧೆಗೆ ಪ್ರೋತ್ಸಾಹ ನೀಡುತ್ತಿದ್ದಾರೆ ಎಂಬ ಆರೋಪ ವ್ಯಾಪಕವಾಗಿ ಕೇಳಿ ಬಂದಿತ್ತು, ಇತ್ತೀಚೆಗೆ ಸಾರ್ವಜನಿಕವಾಗಿ ಮಟ್ಕಾ ದಂಧೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಮಟ್ಕಾ ದಂಧೆಗೆ ಸಹಕರಿಸಿದ್ದ ಆರೋಪದ ಮೇಲೆ ಇಬ್ಬರು ಪೊಲೀಸ್ ಕಾನ್ ಸ್ಟೇಬಲ್ ಗಳನ್ನು ಇತ್ತೀಚೆಗೆ ಅಮಾನತು ಮಾಡಲಾಗಿತ್ತು, ಕರ್ತವ್ಯ ಲೋಪ ಹಿನ್ನೆಲೆಯಲ್ಲಿ […]