ರಾಹುಲ್ ಗಾಂಧಿ ಟ್ವಿಟರ್ ಖಾತೆ ಮೇಲೆ ಕೇಂದ್ರ ಸರ್ಕಾರದ ಕಣ್ಣು ಬಿತ್ತೇ..?
ನವದೆಹಲಿ, ಜ.27- ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಟ್ವಿಟರ್ ಖಾತೆಯಲ್ಲಿ ಅನುಪಾಲಕರ (ಫಾಲೋವರ್ರ್ಸ್) ಸಂಖ್ಯೆಯನ್ನು ಹತ್ತಿಕ್ಕಲಾಗುತ್ತಿದೆ ಎಂಬ ಆರೋಪ ಮತ್ತೊಮ್ಮೆ ಕೇಂದ್ರ ಸರ್ಕಾರ ಮತ್ತು ಕಾಂಗ್ರೆಸ್ ನಡುವೆ ಜಪಾಪಟಿಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣದ ಮುಂಚೂಣಿ ಸಂಸ್ಥೆ ಟ್ವಿಟರ್ ಕೇಂದ್ರ ಸರ್ಕಾರದ ಅಣತಿಯಂತೆ ವಿರೋಧ ಪಕ್ಷದ ನಾಯಕ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಸಿಯುತ್ತಿದೆ ಎಂದು ಕಾಂಗ್ರೆಸ್ ನಾಯಕರು ಟೀಕಿಸಲಾರಂಭಿಸಿದ್ದಾರೆ. ರಾಹುಲ್‍ಗಾಂಧಿ ಅವರು ಪ್ರಸ್ತುತ 19.6 ದಶಲಕ್ಷ ಅನುಪಾಲಕರನ್ನು ಹೊಂದಿದ್ದಾರೆ. ಈ ಮೊದಲು ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ವಿರೋಧಿಸಿ […]