ನಮ್ಮ ನಾಗರೀಕರನ್ನು ಕಷ್ಟದಲ್ಲಿರಲು ಬಿಡಲು ಸಾಧ್ಯವಿಲ್ಲ : ರಾಹುಲ್ ಗಾಂಧಿ

ನವದೆಹಲಿ, ಫೆ.28- ಯುದ್ಧ ಪೀಡಿತ ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯ ಮೂಲದ ವಿದ್ಯಾರ್ಥಿಗಳು ಮತ್ತು ನಾಗರಿಕರು ಕಿರುಕುಳಕ್ಕೆ ಒಳಗಾಗುತ್ತಿದ್ದಾರೆ ಎಂದು ಆತಂಕ ವ್ಯಕ್ತ ಪಡಿಸಿದರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರ ಸರ್ಕಾರ ಸ್ಥಳಾಂತರ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸುವಂತೆ ಒತ್ತಾಯಿಸಿದ್ದಾರೆ. ಉಕ್ರೇನ್ ನಿಂದ ವಿದ್ಯಾರ್ಥಿಗಳು ಕಳುಹಿಸಿರುವ ವಿಡಿಯೋಗಳನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ರಾಹುಲ್ ಗಾಂಧಿ, ಕರುಣಾಜನಕ ಸ್ಥಿತಿಯಲ್ಲಿರುವ ಭಾರತೀಯರನ್ನು ನೋಡಲು ಹಿಂಸೆಯಾಗುತ್ತಿದೆ ಎಂದಿದ್ದಾರೆ. ಹಿಂಸಾಚಾರದಿಂದ ಬಳಲುತ್ತಿರುವ ಭಾರತೀಯ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬದವರನ್ನು ನೋಡಲು ಮುಜುಗರವಾಗುತ್ತಿದೆ. ಯಾವುದೇ […]