ರಾಜ್ಯದಲ್ಲಿ ಇನ್ನೂ 2 ದಿನ ಜಿಟಿ ಜಿಟಿ ಮಳೆ

ಬೆಂಗಳೂರು, ನ.12- ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ನಿನ್ನೆಯಿಂದಲೇ ಜಿಟಿ ಜಿಟಿ ಮಳೆಯಾಗುತ್ತಿದೆ.ನಿನ್ನೆ ಬೆಳಗ್ಗೆ ಆರಂಭವಾದ ತುಂತುರು ಮಳೆ ಆಗಾಗ್ಗೆ ಬರುತ್ತಲೇ ಇದ್ದು, ಇಂದು ಬೆಳಗ್ಗೆ ಕೂಡ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಜಿಟಿ ಜಿಟಿ ಮಳೆ ಮುಂದುವರೆದಿದೆ. ಆದರೆ, ಭಾರೀ ಮಳೆಯಾದ ವರದಿಯಾಗಿಲ್ಲ. ಭಾರೀ ಮಳೆಯಾಗುವ ಮುನ್ಸೂಚನೆಗಳು ಸದ್ಯಕ್ಕೆ ಕಂಡುಬರುತ್ತಿಲ್ಲ. ಅಲ್ಲದೆ, ಆಗಾಗ್ಗೆ ತಂಪಾದ ಮೇಲ್ಮೈ ಗಾಳಿ ಬೀಸುತ್ತಿರುವುದ ರಿಂದ ತೀವ್ರವಾದ ಚಳಿಯ ಅನುಭವವಾಗುತ್ತಿದೆ. ಮತ್ತೆ ಮಳೆ ಆರಂಭವಾಗಿರುವುದರಿಂದ […]