ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೇ ಸಮಸ್ಯೆ ಪರಿಹಾರ

ಬೆಂಗಳೂರು,ಮಾ.19- ಕೆಲವು ಜನರು ಒಳಚರಂಡಿ ಮಾರ್ಗವನ್ನು ಮಣ್ಣು ಹಾಕಿ ಮುಚ್ಚಿದ್ದರಿಂದ ಶುಕ್ರವಾರ ಸುರಿದ ಮಳೆಗೆ ಬೆಂಗಳೂರು-ಮೈಸೂರು ಎಕ್ಸ್‍ಪ್ರೆಸ್ ಹೈವೇ ಮುಳುಗಡೆಯಾಗಿತ್ತು. ತುರ್ತು ಕಾಮಗಾರಿ ನಡೆಸಿದ್ದು, ಸಮಸ್ಯೆ ಬಗೆಹರಿಸಿದೆ ಎಂದು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಸ್ಪಷ್ಟನೆ ನೀಡಿದೆ. ಶುಕ್ರವಾರ ರಾತ್ರಿ ಅಕ ಮಳೆ ಸುರಿದಿದೆ. ಸಾಮಾನ್ಯ 0.1 ಮಿ.ಮೀ ಬದಲಾಗಿ 3.9 ಮಿ ಮೀ ಮಳೆಯಾಗಿದೆ. ಪರಿಣಾಮ ಪ್ರಾಣಿಗಳ ಓಡಾಟಕ್ಕಾಗಿ ನಿರ್ಮಿಸಿರುವ ಮೇಲ್ಸೇತುವೆಯ ಕೆಳಗೆ (ಕಿಲೋ ಮೀಟರ್ 42.640 ರಲ್ಲಿ) ಜನರು ಒಳಚರಂಡಿ ಮಾರ್ಗವನ್ನು ನಿರ್ಬಂಧಿಸಿದ್ದರಿಂದ ಮುಳುಗಡೆಯಾಗಿದೆ. […]
ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ

ಬೆಂಗಳೂರು, ಮಾ. 17- ಕಳೆದ ಎರಡು ದಿನಗಳಿಂದ ರಾಜ್ಯದ ಒಳನಾಡಿನಲ್ಲಿ ಚದುರಿದಂತೆ ಅಲ್ಲಲ್ಲಿ ಮಳೆಯಾಗುತ್ತಿದ್ದು, ಇನ್ನೂ ಮೂರು ದಿನ ಮಳೆ ಮುಂದುವರೆಯುವ ಮುನ್ಸೂಚನೆಗಳಿವೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಪೂರ್ವ ಮುಂಗಾರು ಮಳೆಯಾಗಿದೆ. ಕೆಲವೆಡೆ ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗಿದ್ದರೆ, ಮತ್ತೆ ಕೆಲವೆಡೆ ಆಲಿಕಲ್ಲು ಸಹಿತ ಮಳೆಯಾಗಿದೆ. ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾದ ವರದಿಯಾಗಿದೆ. ಬುಧವಾರ ರಾತ್ರಿ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಕೆಲವೆಡ ಮಳೆಯಾದ ವರದಿಯಾಗಿತ್ತು. ನಿನ್ನೆ ಸಂಜೆ ಹಾಗೂ ರಾತ್ರಿ ಕೂಡ ಮಳೆ […]
ಪೆರುವಿನಲ್ಲಿ ಭೂ ಕುಸಿತು, 36 ಮಂದಿ ಸಾವು

ಲಿಮಾ (ಪೆರು), ಫೆ 7 – ಪೆರು ದೇಶದ ದಕ್ಷಿಣ ಭಾಗದಲ್ಲಿ ನಿರಂತರ ಮಳೆಯಿಂದ ಉಂಟಾದ ಭೂಕುಸಿತದಲ್ಲಿ ಹಲವಾರು ಗ್ರಾಮಗಳು ನಾಶಗೊಂಡಿದ್ದು ಸುಮಾರು 36 ಜನರು ಸಾವನ್ನಪ್ಪಿದ್ದಾರೆ. ಮಿಸ್ಕಿ ಎಂಬ ಗುಡ್ಡಗಾಡು ಪ್ರದೇಶದಲ್ಲಿ 36 ಶವ ಪತ್ತೆಯಾಗಿದ್ದು ಮನೆಗಳ ಮೇಲೆ ಬಂಡೆಗಳು ಉರುಳಿವೆ ಕೆಲ ರಸ್ತೆಗಳು ನದಿಗಳಾಗಿ ಅನೇಕ ವಾಹನಗಳು ಮುಳುಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪರಿಹಾರ ಕಾರ್ಯಾವಾಗಿ ಪ್ರಮುಖ ರಸ್ತೆಯಲ್ಲಿ ಅವಶೇಷಗಳನ್ನು ತೆರವುಗೊಳಿಸಲು ಭಾರೀ ಯಂತ್ರೋಪಕರಣಗಳನ್ನು ಕಳುಹಿಸಲು ಸ್ಥಳೀಯ ಅಧಿಕಾರಿಗಳು ಮನವಿ ಮಾಡಿದ್ದಾರೆ. ಜನ ಸಾಮಾನ್ಯರ […]
ವಾಯುಭಾರ ಕುಸಿತ, ರಾಜ್ಯದಲ್ಲಿ ಇನ್ನೆರಡು ದಿನ ಮಳೆ

ಬೆಂಗಳೂರು,ನ.22- ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣವಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಬೆಳಗ್ಗೆಯಿಂದಲೇ ತುಂತುರು ಮಳೆಯಾಗುತ್ತಿದೆ. ಕಳೆದ ಒಂದು ವಾರದಿಂದ ಬಿಡುವು ಕೊಟ್ಟಿದ ಮಳೆ ಮತ್ತೆ ಆರಂಭವಾಗಿದೆ. ಬೆಳಗ್ಗೆಯಿಂದಲೇ ಪದೇ ಪದೇ ಹಗುರ ಮಳೆಯಾಗುತ್ತಿದ್ದ ಹಿನ್ನೆಲೆಯಲ್ಲಿ ನಗರ ಪ್ರದೇಶಗಳಲ್ಲಿ ದೈನಂದಿನ ಕೆಲಸಗಳಿಗೆ ತೆರಳುವವರು ಕೊಡೆ, ಜರ್ಕಿನ್‍ಗಳ ಮೊರೆ ಹೋಗಿದ್ದ ದೃಶ್ಯ ಸಾಮಾನ್ಯವಾಗಿತ್ತು. ಆಗಾಗ್ಗೆ ತಂಪಾದ ಮೇಲ್ಮೈ ಗಾಳಿ ಬೀಸುತ್ತಿರುವುದರಿಂದ ಚಳಿಯ ಪ್ರಮಾಣವೂ ಹೆಚ್ಚಾಗಿದೆ. ರಾಜ್ಯದ ದಕ್ಷಿಣ […]
ವೆನೆಜುವೆಲಾದಲ್ಲಿ ಭಾರೀ ಮಳೆ ಹಾಗೂ ಭೂಕುಸಿತಕ್ಕೆ 25 ಮಂದಿ ಸಾವು

ಕ್ಯಾರಕಾಸ್ (ವೆನೆಜುವೆಲಾ), ಅ.11-ಲಾಸ್ ಟೆಜೆರಿಯಾಸ್ ನಗರದಲ್ಲಿ ಸಂಭವಿಸಿದ ಭಾರೀ ಮಳೆ ಹಾಗೂ ಭೂಕುಸಿತಕ್ಕೆ 25 ಮಂದಿ ಸಾವನ್ನಪ್ಪಿದ್ದು ಹಲವಾರು ಜನರು ಕಣ್ಮರೆಯಾಗಿದ್ದಾರೆ. ಜೂಲಿಯಾ ಚಂಡಮಾರುತದಿಂದ ಉಂಟಾದ ಭಾರೀ ಮಳೆಯಿಂದ ಹಲವೆಡೆ ಭೂಕುಸಿತ ಸಂಭವಿಸಿದ್ದು ವೆನೆಜುವೆಲಾದ ಪ್ರಮುಖ ಕೈಗಾರಿಕಾ ವಲಯದಲ್ಲಿ ನೆಲೆಗೊಂಡಿರುವ ಸುಮಾರು 50,000 ಜನರ ಬಾದಿತರಾಗಿದ್ದಾಸರೆ ನಗರದಲ್ಲಿ 300 ಕ್ಕೂ ಹೆಚ್ಚು ಮನೆಗಳು ಹಾನಿಗೊಂಡಿದೆ. ಬೆಟ್ಟ ಪ್ರದೇಶದ ಬಳಿ ಇದ್ದ ಮನೆಗಳು ಮಣಿನಲ್ಲಿ ಹುದುಗಿಹೋಗಿದ್ದು ಸುಮಾರು 52 ಮಂದಿ ನಾಪತ್ತೆಯಾಗಿದ್ದಾರೆ ಪರಿಹಾರ ಕಾರ್ಯಾಚರಣೆ ಗೆ ಡ್ರೋನ್‍ಳು ಮತ್ತು […]
ಸತತ ಮಳೆಯಿಂದ ಅಂತರ್ಜಲ ವೃದ್ಧಿ : ಸಚಿವ ಗೋವಿಂದ ಕಾರಜೋಳ
ಬೆಂಗಳೂರು,ಸೆ.29- ರಾಜ್ಯದಲ್ಲಿ ಕಳೆದ ಮೂರು ವರ್ಷಗಳಿಂದ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಕಪ್ಪು, ಬೂದು ಪ್ರದೇಶಗಳು ಕಡಿಮೆಯಾಗಿವೆ. ಅಂತರ್ಜಲ ಸಾಕಷ್ಟು ಹೆಚ್ಚಳವಾಗಿರುವುದರಿಂದ ನೀರಿನಲ್ಲಿದ್ದ ಅಪಾಯಕಾರಿ ರಾಸಾಯನಿಕ ಅಂಶಗಳು ಕಡಿಮೆಯಾಗಿವೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಕಪ್ಪು ಮತ್ತು ಬೂದು ಪ್ರದೇಶದ ಸಮಸ್ಯೆಗೆ ಪರಿಹಾರ ಸಿಕ್ಕಿದೆ. ಸುರಕ್ಷಿತ ಹಾಗೂ ಶುದ್ದ ಕುಡಿಯುವ ನೀರು ಲಭ್ಯವಾಗುತ್ತಿದೆ. ರಾಜ್ಯದೆಲ್ಲೆಡೆ ಉತ್ತಮ ಮಳೆಯಾಗಿ ಜಲಾಶಯಗಳು, ಕೆರೆಕಟ್ಟೆಗಳು ತುಂಬಿದ್ದು, ಅಂತರ್ಜಲದ ಪ್ರಮಾಣವು ಸಾಕಷ್ಟು ಹೆಚ್ಚಳವಾಗಿದೆ. ಇದರಿಂದ ಟ್ಯಾಂಕರ್ […]
ಅತಿವೃಷ್ಟಿ, ಪ್ರವಾಹ ಕುರಿತ ಚರ್ಚೆಗೆ 3 ದಿನ ಅವಕಾಶ : ಸಭಾಧ್ಯಕ್ಷ ಕಾಗೇರಿ
ಬೆಂಗಳೂರು,ಸೆ.13-ಅತಿವೃಷ್ಟಿ, ಪ್ರವಾಹಕ್ಕೆ ಸಂಬಂಧಿಸಿದಂತೆ ಇಂದಿನಿಂದ ಮೂರು ದಿನಗಳ ಕಾಲ ಚರ್ಚೆಗೆ ಅವಕಾಶ ಮಾಡಿಕೊಡಲಾಗುವುದು ಎಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ವಿಧಾನಸಭೆಯಲ್ಲಿ ತಿಳಿಸಿದರು.ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನಿಲುವಳಿ ಸೂಚನೆಯನ್ನು ನಿಯಮ 69ಕ್ಕೆ ಮಾರ್ಪಡಿಸಿ ಚರ್ಚೆಗೆ ಅವಕಾಶ ಮಾಡಿಕೊಡಲಾಗಿದೆ. ವಿಷಯದ ಮಹತ್ವ ಅರಿತು ಈ ರೀತಿ ಮಾಡಲಾಗಿದೆ. ಸದಸ್ಯರ ಹಕ್ಕನ್ನು ಮೊಟಕುಗೊಳಿಸಿಲ್ಲ ಎಂದು ಸ್ಪಷ್ಟಪಡಿಸಿದರು. ಸಿದ್ದರಾಮಯ್ಯ ಮಾತನಾಡಿ, ಮಹತ್ವದ ಹಾಗೂ ಜರೂರಾದ ವಿಷಯವಾಗಿದ್ದರಿಂದ ನಿಲುವಳಿ ಸೂಚನೆಗೆ ಅವಕಾಶ ಕೋರಲಾಗಿತ್ತು. ಪೂರ್ವಭಾವಿ ವಿಷಯ ಪ್ರಸ್ತಾಪಕ್ಕೂ ಅವಕಾಶ ಮಾಡಿಕೊಡಲಾಗಿದೆ. […]
14 ಜಿಲ್ಲೆಗಳಲ್ಲಿ ಅತಿವೃಷ್ಟಿ, ಸಂತ್ರಸ್ತರಿಗೆ ಕಾಳಜಿ ಕಿಟ್
ಬೆಂಗಳೂರು,ಆ.8- ರಾಜ್ಯದ 14 ಜಿಲ್ಲೆಗಳಲ್ಲಿ ಪ್ರವಾಹ ಹಾಗೂ ಅತಿವೃಷ್ಟಿಯಿಂದ 160 ಗ್ರಾಮಗಳು ಸಂಕಷ್ಟಕ್ಕೆ ಸಿಲುಕಿದ್ದು, ಈವರೆಗೂ 73 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 21,727 ಜನರು ಸಂಕಷ್ಟಕ್ಕೀಡಾಗಿದ್ದಾರೆ. ಸಂಕಷ್ಟಕ್ಕೆ ಸಿಲುಕಿದವರಿಗೆ ಕಾಳಜಿ ಕಿಟ್‍ಗಳನ್ನು ನೀಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾಹಪೀಡಿತ ಭಾಗದಲ್ಲಿ 8100 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. 10ರಿಂದ 15 ದಿನಗಳಿಗೆ ಆಗುವಷ್ಟು ಆಹಾರದ ಕಿಟ್‍ಗಳನ್ನು ನೀಡಲಾಗಿದೆ ಎಂದರು. ರಾಜ್ಯದ 21 ಜಿಲ್ಲೆಗಳಿಗೆ 200 ಕೋಟಿ ಬಿಡುಗಡೆ ಮಾಡಲಾಗಿದೆ. ಮನೆ […]
ಬೆಂಗಳೂರಿನಲ್ಲಿ ನಿಲ್ಲದ ಮಳೆ ಆವಾಂತರ, 50ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು
ಬೆಂಗಳೂರು,ಆ.2- ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆ ನಗರದಲ್ಲಿ ಹಲವಾರು ಆವಾಂತರಗಳನ್ನು ಸೃಷ್ಟಿಸಿತ್ತು.ಬಿಟ್ಟುಬಿಡದೆ ಸುರಿದ ಮಳೆಗೆ ಹೊರಮಾವು ಸಮೀಪದ ಸಾಯಿ ಲೇಔಟ್ ಅಕ್ಷರಶಃ ಕೆರೆಯಂತಾಗಿತ್ತು. ಇಡೀ ಪ್ರದೇಶ ಕೆರೆಯಂತಾಗಿದ್ದ ಪರಿಣಾಮ 50ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ ಭಾರೀ ಸಮಸ್ಯೆ ಎದುರಾಗಿತ್ತು. ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಟಿವಿ, ಫ್ರಿಡ್ಜ್ ಸೇರಿದಂತೆ ದಿನನಿತ್ಯ ಬಳಕೆಯ ಆಹಾರ ಸಾಮಾಗ್ರಿಗಳು ನೀರು ಪಾಲಾದವು.ಕಳೆದ ಬಾರಿ ಸುರಿದ ಮಳೆ ಸಂದರ್ಭದಲ್ಲೂ ಸಾಯಿ ಲೇಔಟ್ ಕೆರೆಯಂತಾಗಿತ್ತು. ಪ್ರತಿ ಬಾರಿ ಮಳೆ ಬಂದಾಗಲೂ ಇದೇ […]
ಅತಿವೃಷ್ಟಿ-ಪ್ರವಾಹದಿಂದ ಹಾನಿಗೀಡಾದ ರಸ್ತೆ ದುರಸ್ತಿಗೆ 200 ಕೋಟಿ ರೂ. ಬಿಡುಗಡೆ
ಬೆಂಗಳೂರು,ಜು.19- ಅತಿವೃಷ್ಟಿ ಹಾಗೂ ಪ್ರವಾಹದಿಂದ ಹಾನಿಗೀಡಾದ ರಸ್ತೆ ದುರಸ್ತಿಗೆ ತುರ್ತಾಗಿ 200 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ತಿಳಿಸಿದರು. ಅತಿವೃಷ್ಟಿ ಹಾಗೂ ಪ್ರವಾಹದಿಂದ ರಸ್ತೆ ಹಾನಿಗೀಡಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ, ರಾಷ್ಟ್ರೀಯ ಹೆದ್ದಾರಿ, ರಾಷ್ಟ್ರೀಯ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯವನ್ನು ತಿಳಿಸಿದರು. ಕೊಡಗು, ಹಾಸನ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳು ವಚ್ರ್ಯುವಲ್ ಮೂಲಕ ಸಭೆಯಲ್ಲಿ ಪಾಲ್ಗೊಂಡು ಆಯಾ ಜಿಲ್ಲೆಗಳ ಸಮಸ್ಯೆಗಳನ್ನು ಹೇಳಿದ್ದಾರೆ. ಮಳೆ […]