ಸೋನಿಯಾ ಇಡಿ ವಿಚಾರಣೆ ವಿರೋಧಿಸಿ ರಾಜಭವನ ಚಲೋ

ಬೆಂಗಳೂರು,ಜು.17- ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರನ್ನು ವಿಚಾರಣೆಗೆ ಕರೆದಿರುವ ಜಾರಿ ನಿರ್ದೇಶನಾಲಯದ ಕ್ರಮ ವಿರೋಧಿಸಿ ಕಾಂಗ್ರೆಸ್ ಜು.21ರಂದು ರಾಜಭವನ ಮುತ್ತಿಗೆ ಹಮ್ಮಿಕೊಂಡಿದೆ. ನಗರದಲ್ಲಿಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತುರ್ತು ಪತ್ರಿಕಾಗೋಷ್ಠಿ ನಡೆಸಿ ಪ್ರತಿಭಟನೆಯ ಮಾಹಿತಿ ತಿಳಿಸಿದರು.ಬಿಜೆಪಿ ಸರ್ಕಾರ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಕಾಂಗ್ರೆಸ್ ನಾಯಕರ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದೆ. ಕಪ್ಪು ಮಸಿ ಬಳಿಯುವ ಯತ್ನ ಮಾಡುತ್ತಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣ ಮುಗಿದು ಹೋದ ಅಧ್ಯಾಯ ಎಂದು ಹಣಕಾಸು ಸಚಿವರಾಗಿದ್ದ ಅರುಣ್‍ಜೈಟ್ಲಿ […]