ಮೈದಾನದಲ್ಲಿ ಶಾಲೆ ನಿರ್ಮಾಣಕ್ಕೆ ವಿರೋಧ

ಬೆಂಗಳೂರು,ನ.14- ಮೈದಾನದಲ್ಲಿ ಶಾಲೆ ಕಟ್ಟಲು ಮುಂದಾಗಿದ್ದ ಬಿಬಿಎಂಪಿ ಧೋರಣೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ರಾಜರಾಜೇಶ್ವರಿನಗರದಲ್ಲಿರುವ ಕೆಂಪೇಗೌಡ ಕ್ರೀಡಾಂಗಣದಲ್ಲಿ ಬಿಬಿಎಂಪಿ ಗುಣಮಟ್ಟದ ಶಾಲೆ ನಿರ್ಮಾಣ ಮಾಡಲು ತೀರ್ಮಾನಿಸಿತ್ತು. ಆದರೆ, ಈ ಶಾಲೆ ನಿರ್ಮಾಣಕ್ಕೆ ಸ್ಥಳೀಯರು ವ್ಯಾಪಕ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ಹಾದಿ ಹಿಡಿದಿರುವುದರಿಂದ ಬಿಬಿಎಂಪಿ ಆಡಳಿತ ವರ್ಗಕ್ಕೆ ಹೊಸ ತಲೆನೋವು ಆರಂಭವಾಗಿದೆ. ಆರ್ ಆರ್ ನಗರ ವಲಯದ ಬಿಇಎಂಎಲ್ 5 ಹಂತದಲ್ಲಿ ಇರುವ ಕೆಂಪೇಗೌಡ ಕ್ರೀಡಾಂಗಣದಲ್ಲಿ ಕಳೆದ 1992 ರಿಂದ ಸ್ಥಳೀಯ ಮಕ್ಕಳು ಆಟವಾಡುತ್ತಿದ್ದಾರೆ. ಸುತ್ತಮುತ್ತಲಿನ ನಿವಾಸಿಗರ ಮಕ್ಕಳಿಗೆ […]