ಬಿಜೆಪಿ ಶಾಸಕನ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಮಹಿಳಾ ಆಯೋಗ

ಬೆಂಗಳೂರು,ಫೆ.8-ಬಿಜೆಪಿ ಶಾಸಕ ರಾಜ್‍ಕುಮಾರ್ ಪಾಟೀಲ ತೇಲ್ಕೂರ ಬ್ಲಾಕ್‍ಮೇಲ್ ಪ್ರಕರಣ ಕುರಿತಂತೆ ಮಹಿಳಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಶಾಸಕ ರಾಜ್‍ಕುಮಾರ್ ವಿರುದ್ಧ 40 ವರ್ಷದ ಮಹಿಳೆ ಕಿರುಕುಳ ಆರೋಪ ಮಾಡಿರುವುದನ್ನು ಗಂಭೀರವಾಗಿ ಪರಿಗಣಿಸಿ ನಾವು ಸುಮೋಟೊ ಪ್ರಕರಣ ದಾಖಲಿಸಿಕೊಂಡಿದ್ದೇವೆ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ತಿಳಿಸಿದ್ದಾರೆ. ಶಾಸಕರ ವಿರುದ್ಧ ದೂರು ನೀಡಿರುವ ಮಹಿಳೆಗೆ ರಕ್ಷಣೆ ನೀಡುವಂತೆ ಪೊಲೀಸರಿಗೆ ಸೂಚಿಸಿದ್ದೇವೆ. ಈ ಕುರಿತಂತೆ ನಾನು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರೊಂದಿಗೆ ಮಾತನಾಡಿದ್ದೇನೆ ಎಂದು ನಾಯ್ಡು […]