ನಾಳೆ 67 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಬೆಂಗಳೂರು,ಅ.31- ನಾಡಹಬ್ಬ 67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 67 ಮಂದಿಗೆ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ನಾಳೆ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಲಿದ್ದು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಸುನೀಲ್‍ಕುಮಾರ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿರುವವರು ಮುನ್ನೆಲೆಗೆ ಬಾರದೆ ನಿಸ್ವಾರ್ಥವಾಗಿ ಸೇವೆ ಸಲ್ಲಿಸಿರುವ ಮಹಾನೀಯರಾಗಿದ್ದಾರೆ. ವಿಶೇಷವಾಗಿ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತರಿಗೆ 5 ಲಕ್ಷ ರೂ. ನಗದು, […]