ಯಾವುದೇ ಕ್ಷಣದಲ್ಲಿ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟ

ಬೆಂಗಳೂರು,ಅ.30- ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಾಡುನುಡಿ, ವಿಜ್ಞಾನ, ಭಾಷೆ, ಸಾಹಿತ್ಯ, ಪತ್ರಿಕೋದ್ಯಮ, ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ನೀಡುವ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿ ಯಾವುದೇ ಕ್ಷಣದಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಗೆ ಸಹಿ ಹಾಕಿದ್ದು, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಚಿವ ಸುನೀಲ್‍ಕುಮಾರ್ ಪಟ್ಟಿಯನ್ನು ಇಂದು ಸಂಜೆ ಇಲ್ಲವೇ ನಾಳೆ ಪ್ರಕಟಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಬಾರಿ ಅರ್ಹರಿಗೆ ಮಾತ್ರ ಹಾಗೂ […]

ಚಾಮರಾಜಪೇಟೆ ಮೈದಾನದಲ್ಲಿ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡಿವಂತೆ ಆಗ್ರಹ

ಬೆಂಗಳೂರು,ಅ.17- ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇರುವ ಚಾಮರಾಜಪೇಟೆ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡಬೇಕೆಂದು ಚಾಮರಾಜಪೇಟೆ ನಾಗರೀಕ ಒಕ್ಕೂಟದ ಅಧ್ಯಕ್ಷ ರಾಮೇಗೌಡ ಆಗ್ರಹಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾತಂತ್ರ್ಯ ದಿನಾಚರಣೆ ಮಾದರಿಯಲ್ಲೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಬೇಕೆಂದು ಒತ್ತಾಯಿಸಿದರು. ನ್ಯಾಯಾಲಯದ ಆದೇಶದ ಪ್ರಕಾರ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣ ರಾಜ್ಯೋತ್ಸವ ಆಚರಣೆಗೆ ಅನುಮತಿ ಇದೆ. ಹೀಗಾಗಿ ಸರ್ಕಾರ ರಾಜ್ಯೋತ್ಸವ ಆಚರಣೆಗೂ ಅನುಮತಿ ಕೋರಿ ಮೇಲ್ಮನವಿ ಸಲ್ಲಿಸಬೇಕೆಂದು ಆಗ್ರಹಿಸಿದರು. ಈ ಕುರಿತು ಈಗಾಗಲೇ ಕಂದಾಯ ಸಚಿವ ಆರ್. […]

ಕನ್ನಡ ರಾಜ್ಯೋತ್ಸವಕ್ಕೆ ಕೋಟಿಕಂಠ ಗಾಯನ

ಬೆಂಗಳೂರು,ಅ.11- ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದ್ದು, ಅದಕ್ಕೂ ಮುನ್ನ ಅಕ್ಟೋಬರ್ 28ರಂದು ಕೋಟಿಕಂಠ ಗಾಯನವನ್ನು ಏಕಕಾಲದಲ್ಲಿ ಒಂದು ಕೋಟಿ ಜನರಿಂದ ಹಾಡನ್ನು ಹಾಡುವ ಅಭಿಯಾನ ಹಮ್ಮಿಕೊಂಡಿರುವುದಾಗಿ ಕನ್ನಡ ಮತ್ತು ಸಂಸ್ಕøತಿ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದರು. ಕೋಟಿಕಂಠ ಗಾಯನ ಕುರಿತ ಸಭೆಯಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಮಾತಾಡ್ ಮಾತಾಡ್ ಕನ್ನಡ ಅಭಿಯಾನವನ್ನು ಮುಂದುವರೆಸಿದ್ದೇವೆ. 28ರಂದು ಬೆಳಗ್ಗೆ 11 ಗಂಟೆಗೆ 10 ಸಾವಿರ ವಿವಿಧ […]

ಚಾಮರಾಜಪೇಟೆ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಪಟ್ಟು

ಬೆಂಗಳೂರು,ಸೆ.27- ಚಾಮರಾಜಪೇಟೆ ಈದ್ಗಾ ಮೈದಾನದ ವಿವಾದ ಇನ್ನು ತಣ್ಣಗಾದಂತೆ ಕಾಣುತ್ತಿಲ್ಲ. ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಪಟ್ಟು ಹಿಡಿದಿದ್ದ ಹಿಂದೂಪರ ಸಂಘಟನೆಗಳು ಅನುಮತಿ ಸಿಗದ ಕಾರಣ ನಿರಾಸೆಗೊಂಡಿದ್ದರು. ಗಣೇಶೋತ್ಸವದ ಸಂದರ್ಭದಲ್ಲಿ ತಣ್ಣಗಾಗಿದ್ದ ಹಿಂದೂ ಪರ ಸಂಘಟನೆಗಳ ಮುಖಂಡರು ಇದೀಗ ಕನ್ನಡ ರಾಜ್ಯೋತ್ಸವ ಆಚರಣೆಗೆ ಪಟ್ಟು ಹಿಡಿದಿದ್ದಾರೆ. ಇದರಿಂದ ಕಂದಾಯ ಇಲಾಖೆಗೆ ಮತ್ತೊಂದು ಟೆನ್ಷನ್ ಶುರುವಾಗಿದೆ. ಕೇವಲ ಕನ್ನಡ ಪರ ಹಾಗೂ ಹಿಂದೂಪರ ಸಂಘಟನೆಗಳಲ್ಲದೆ ಕನ್ನಡ ಸಾಹಿತ್ಯ ಪರಿಷತ್ ಕೂಡ ಮೈದಾನದಲ್ಲಿ ನಾಡಧ್ವಜ ಹಾರಿಸುವಂತೆ ಒತ್ತಡ ಹಾಕಿದೆ. ಮೈದಾನದಲ್ಲಿ ತ್ರಿವರ್ಣ […]

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪರಿಸರ ಪ್ರೇಮಿ ವೀರಚಾರಿ ಆತ್ಮಹತ್ಯೆ

ದಾವಣಗೆರೆ, ಸೆ.20- ಪರಿಸರ ಪ್ರೇಮಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೀರಚಾರಿ (68) ಆತ್ಮಹತ್ಯೆಗೆ ಶರಣಾಗಿದ್ದಾರೆ.ಇಂದು ಮುಂಜಾನೆ ಹರಿಹರ ತಾಲೂಕಿನ ಮಿಡ್ಲಕಟ್ಟೆ ಗ್ರಾಮದಲ್ಲಿರುವ ಅವರ ಮನೆ ಸಮೀಪದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜನರಿಗೆ ಅಕ್ಕಿ ವಿತರಿಸದೆ ನ್ಯಾಯಬೆಲೆ ಅಂಗಡಿಯವರು ವಂಚನೆ ಮಾಡುತ್ತಿದ್ದಾರೆ ಎಂದು ಹೇಳಿ ಕಳೆದ ಹಲವು ದಿನಗಳಿಂದ ವೀರಾಚಾರಿ ಹೋರಾಟ ನಡೆಸಿದ್ದರು. ಇದು ನ್ಯಾಯಾಲಯದ ಮೆಟ್ಟಿಲು ಕೂಡ ಏರಿತ್ತು. ಇತ್ತೀಚೆಗೆ ಅವರು ನನಗೆ ನ್ಯಾಯ ಸಿಗದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪ್ರತಿಜ್ಞೆ […]