ನಿರ್ಬಂಧಗಳ ಹೆಸರಿನಲ್ಲಿ ಜನರ ಬದುಕಿನ ಜೊತೆ ಚೆಲ್ಲಾಟ ನಿಲ್ಲಿಸಿ : ರಕ್ಷಾ ರಾಮಯ್ಯ

ಬೆಂಗಳೂರು, ಜ.19- ಕೋವಿಡ್ ಸೋಂಕು ನಿಯಂತ್ರಣ, ವಾರಾಂತ್ಯ ಕಫ್ರ್ಯೂ ಮುಂದುವರೆಸುವ ವಿಚಾರದಲ್ಲಿ ರಾಜ್ಯ ಬಿಜೆಪಿ ನಾಯಕರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಚಿವರು ಭಿನ್ನ ಭಿನ್ನವಾಗಿ ಗೊಂದಲಕಾರಿ ಹೇಳಿಕೆಗಳನ್ನು ನೀಡುತ್ತಿದ್ದು, ಇದರಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ ಎಂದು ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್.ರಕ್ಷಾ ರಾಮಯ್ಯ ಆರೋಪಿಸಿದ್ದಾರೆ. ಮುಖ್ಯಮಂತ್ರಿ ಮತ್ತು ಸರ್ಕಾರದ ಕಾರ್ಯವೈಖರಿ ಬಗ್ಗೆ ವಿಶ್ವಾಸವಿಲ್ಲ ಎಂಬುದನ್ನು ಬಿಜೆಪಿ ನಾಯಕರೇ ಬಹಿರಂಗವಾಗಿ ಹೇಳುತ್ತಿದ್ದಾರೆ. ಇದು ಅರಾಜಕತೆಯ ಆಡಳಿತ ವೈಖರಿಗೆ ನಿದರ್ಶನವಾಗಿದೆ. ಸರ್ಕಾರವನ್ನು ಹಾದಿ ಬೀದಿಯಲ್ಲಿ ಜನತೆ ವ್ಯಂಗ್ಯಮಾಡುವ ಸನ್ನಿವೇಶ ಸೃಷ್ಟಿಯಾಗಿದೆ […]