ಸಿಎಂ ಎದುರೆ ಸಚಿವ ಅಶ್ವಥ್ ನಾರಾಯಣ್ – ಸಂಸದ ಡಿ.ಕೆ.ಸುರೇಶ್ ಜಟಾಪಟಿ

ಬೆಂಗಳೂರು,ಜ.3- ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ್ ಹಾಗೂ ಸಂಸದ ಡಿ.ಕೆ.ಸುರೇಶ್ ನಡುವೆ ಮಾತಿನ ಜಟಾಪಟಿ ನಡೆದು ಕೈ ಕೈ ಮಿಲಾಯಿಸುವ ಹಂತ ತಲುಪಿದ ಘಟನೆ ರಾಮನಗರದಲ್ಲಿಂದು ನಡೆದಿದೆ. ರಾಮನಗರದಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಂದು ಸರ್ಕಾರದ ವತಿಯಿಂದ ಹಮ್ಮಿಕೊಂಡಿದ್ದ ಅಂಬೇಡ್ಕರ್ ಹಾಗೂ ನಾಡಪ್ರಭು ಕೆಂಪೇಗೌಡ ಪ್ರತಿಮೆಗಳ ಅನಾವರಣ ಮತ್ತು ವಿವಿಧ ಅಭಿವೃದ್ದಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಈ ಅಹಿತಕರ ಘಟನೆ ನಡೆದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿಯೇ ಸಚಿವರು , ಸಂಸದರು, ವಿಧಾನಪರಿಷತ್ ಸದಸ್ಯರು ಪರಸ್ಪರ ವಾಗ್ದಾಳಿ […]