‘ರಾಮಚರಿತ’ ಟೀಕಿಸಿದವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲು ಒತ್ತಾಯ

ಬಲ್ಲಿಯಾ,ಜ.24- ರಾಮಚರಿತಮಾನಗಳ ಕೆಲವು ಶ್ಲೋಕಗಳು ಸಾಮಾಜಿಕ ತಾರತಮ್ಯವನ್ನು ಉತ್ತೇಜಿಸುತ್ತವೆ ಎಂದು ಹೇಳಿಕೆ ನೀಡಿರುವ ಸಮಾಜವಾದಿ ಪಕ್ಷದ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಅವರ ಹೇಳಿಕೆಯನ್ನು ಶಂಕರಾಚಾರ್ಯ ಪರಿಷತ್ತಿನ ಅಧ್ಯಕ್ಷ ಸ್ವಾಮಿ ಆನಂದ್ ಸ್ವರೂಪ್ ತೀವ್ರವಾಗಿ ಖಂಡಿಸಿದ್ದು, ಸಮಾಜವಾದಿ ನಾಯಕನ ವಿರುದ್ಧ ದೇಶದ್ರೋಹ ಆರೋಪದಡಿ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿದ್ದಾರೆ. ಅಗ್ಗದ ಪ್ರಚಾರ ಮತ್ತು ನಿರ್ದಿಷ್ಟ ಸಮುದಾಯದ ಮತವನ್ನು ಗಳಿಸುವ ಪ್ರಯತ್ನವಾಗಿ ಮೌರ್ಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆನಂದ್ ಸ್ವರೂಪ್ ಟೀಕಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಪ್ರಮುಖ ಹಿಂದುಳಿದ ವರ್ಗಗಳ ನಾಯಕರಾಗಿರುವ […]