ಹೈಕೋರ್ಟ್ CJ ನಿಗಾದಲ್ಲಿ PSI ಹಗರಣ ತನಿಖೆಗೆ ಸುರ್ಜೆವಾಲ ಆಗ್ರಹ

ಬೆಂಗಳೂರು,ಜ.25- ಪಿಎಸ್‍ಐ ಹಗರಣವನ್ನು ಮುಚ್ಚಿ ಹಾಕಲು ರಾಜ್ಯ ಸರ್ಕಾರ ವ್ಯವಸ್ಥಿತವಾದ ವ್ಯೂಹ ರಚನೆ ಮಾಡಿದೆ, ತನಿಖೆ ನಡೆಸುವ ತನಿಖಾಕಾರಿಗಳನ್ನೇ ವಿಚಾರಣೆಗೆ ಒಳಪಡಿಸುವ ಅಗತ್ಯ ಇರುವುದರಿಂದ ಹೈಕೋರ್ಟ್‍ನ ಮುಖ್ಯನ್ಯಾಯಮೂರ್ತಿಗಳ ನಿಗಾವಣೆಯಲ್ಲಿ ಸ್ವತಂತ್ರ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ ಆಗ್ರಹಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಗರಣದಲ್ಲಿ ಹಿಂದಿನ ಗೃಹ ಸಚಿವ ಹಾಗೂ ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹಾಲಿ ಗೃಹ ಸಚಿವ […]